ಮಂಗಳವಾರ, ಮಾರ್ಚ್ 9, 2021
23 °C

ಪೊಗರು ತಮಿಳು ರಿಮೇಕ್‌ ‘ಸೆಮ್ಮ ತಿಮಿರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆ್ಯಕ್ಷನ್ ಪ್ರಿ‌ನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಪೊಗರು’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾವು ಜನವರಿಯಲ್ಲಿ ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಇದು ಥಿಯೇಟರ್‌ಗಳ ಪುನಾರಾರಂಭದ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಬಿಗ್‌ಬಜೆಟ್ ಸಿನಿಮಾ ಎನ್ನಬಹುದು. ಇದರ ತಮಿಳು ಶೀರ್ಷಿಕೆ ಹಾಗೂ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದೆ ಚಿತ್ರತಂಡ.

ಈ ಸಿನಿಮಾಕ್ಕೆ ತಮಿಳಿನಲ್ಲಿ ‘ಸೆಮ್ಮ ತಿಮಿರು’ ಎಂದು ಹೆಸರಿಸಲಾಗಿದೆ. ಅದನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ ನಟ ಧ್ರುವ ಸರ್ಜಾ.

ಚಿತ್ರದಲ್ಲಿ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಧ್ರುವ ಸರ್ಜಾ ಜೊತೆ ತೆರೆ ಹಂಚಿಕೊಂಡಿದ್ದಾರೆ. ನಂದಕಿಶೋರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಸಿನಿಮಾದ ಹಿಂದಿ ಡಬ್ಬಿಂಗ್‌ ಹಕ್ಕು ₹7.2 ಕೋಟಿಗೆ ಮಾರಾಟವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು