ಶನಿವಾರ, ಸೆಪ್ಟೆಂಬರ್ 18, 2021
30 °C

ಅಶ್ಲೀಲ ಚಿತ್ರ ನಿರ್ಮಾಣ: ಕುಂದ್ರಾ ಪೊಲೀಸ್ ಕಸ್ಟಡಿ ಜುಲೈ 27ರವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳನ್ನು ಪ್ರಕಟಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರ ಪೊಲೀಸ್ ಕಸ್ಟಡಿಯನ್ನು ಜುಲೈ 27 ರವರೆಗೆ ಮುಂಬೈನ ನ್ಯಾಯಾಲಯ ವಿಸ್ತರಿಸಿದೆ.

ನಟಿ ಶಿಲ್ಪಾ ಶೆಟ್ಟಿಯವರ ಪತಿ ಕುಂದ್ರಾ ಅವರನ್ನು ಜುಲೈ 19 ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ.. ಬದುಕನ್ನು ತಡೆಯಲು ಸಾಧ್ಯವಿಲ್ಲ: ಪತಿಯ ಬಂಧನದ ನಂತರ ಶಿಲ್ಪಾ ಶೆಟ್ಟಿ ಮೊದಲ ಪೋಸ್ಟ್‌

ಶುಕ್ರವಾರ ಅವರನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಿದ್ದ ಪೊಲೀಸರು ಮತ್ತೆ ಕಸ್ಟಡಿಗೆ ಕೇಳಿದ್ದರು.

ಅಶ್ಲೀಲ ಚಿತ್ರಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಅಕ್ರಮ ಚಟುವಟಿಕೆಯಿಂದ 45 ವರ್ಷದ ಉದ್ಯಮಿ ರಾಜ್ ಕುಂದ್ರಾ ಆರ್ಥಿಕವಾಗಿ ಲಾಭ ಗಳಿಸುತ್ತಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕುಂದ್ರಾ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದೇವೆ. ಅದರಲ್ಲಿರುವ ಕಂಟೆಂಟ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ ಮತ್ತು ಅವರ ವ್ಯವಹಾರ, ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕುಂದ್ರಾ ಅವರಲ್ಲದೆ, ಪೊಲೀಸರು ಮತ್ತೊಬ್ಬ ಆರೋಪಿ ರಿಯಾನ್ ಥಾರ್ಪ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರ ಪೊಲೀಸ್ ಕಸ್ಟಡಿ ಅವಧಿಯೂ ಜುಲೈ 27 ರವರೆಗೆ ವಿಸ್ತರಣೆಯಾಗಿದೆ.

ಇದನ್ನೂ ಓದಿ: ನಟಿಗೆ ನಗ್ನವಾಗಿ ಕಾಣಿಸಿಕೊಳ್ಳಲು ಹೇಳಿದ್ದ ರಾಜ್‌ ಕುಂದ್ರಾ?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು