ಸೋಮವಾರ, ಆಗಸ್ಟ್ 8, 2022
24 °C

ಬ್ರಾಹ್ಮಣ್ಯದ ಅವಹೇಳನ: ನಟ ಚೇತನ್‌ಗೆ ಪೊಲೀಸರ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎನ್ನಲಾದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ನಟ ಚೇತನ್ ಅವರಿಗೆ ಬಸವನಗುಡಿ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

‘ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ ಎಂಬುವರು ತಮ್ಮ ವಿರುದ್ಧ ದೂರು ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಎಫ್‌ಐಆರ್ ದಾಖಲಾಗಿದೆ’ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

‘ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೊಗಳನ್ನು ಯೂಟ್ಯೂಬ್ ಹಾಗೂ ಫೇಸ್‌ಬುಕ್‌ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ವಿಡಿಯೊಗಳನ್ನು ಯಾವ ಐ.ಡಿ.ಗಳಿಂದ ಅಪ್‌ಲೋಡ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿ ತನಿಖೆಗೆ ಸಹಕರಿಸಬೇಕು’ ಎಂದೂ ನೋಟಿಸ್‌ನಲ್ಲಿ ಪೊಲೀಸರು ತಿಳಿಸಿದ್ದಾರೆ.

ನೋಟಿಸ್ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟ ಚೇತನ್, ‘ಬ್ರಾಹ್ಮಣ್ಯದ ವಿರುದ್ಧ ನನ್ನ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಪೋಸ್ಟ್‌ಗಳ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬುಧವಾರ ಬೆಳಿಗ್ಗೆ ಬಸವನಗುಡಿ ಠಾಣೆಗೆ ಹೋಗುತ್ತಿದ್ದೇನೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು