ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ನಟಿ ಪೂಜಾ ಗಾಂಧಿ ಮದುವೆ

ಮಂತ್ರ ಮಾಂಗಲ್ಯದ ಮೂಲಕ ವಿಜಯ್‌ ಘೋರ್ಪಡೆ ಅವರ ಜೊತೆ ಕಲ್ಯಾಣ
Published 28 ನವೆಂಬರ್ 2023, 6:15 IST
Last Updated 28 ನವೆಂಬರ್ 2023, 6:15 IST
ಅಕ್ಷರ ಗಾತ್ರ

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ‘ಮುಂಗಾರು ಮಳೆ’ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ ನಟಿ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

‘ನ.29ರಂದು ಸಂಜೆ ಮಂತ್ರ ಮಾಂಗಲ್ಯದ ಮೂಲಕ ವಿಜಯ್‌ ಘೋರ್ಪಡೆ ಅವರನ್ನು ಮದುವೆಯಾಗುತ್ತಿದ್ದೇನೆ. ನಮ್ಮನ್ನು ಹರಸಿ, ಆಶೀರ್ವದಿಸಿ’ ಎಂದು ಕನ್ನಡದಲ್ಲಿ ಖುದ್ದಾಗಿ ಆಮಂತ್ರಣ ಪತ್ರವನ್ನು ಪೂಜಾ ಗಾಂಧಿ ಬರೆದಿದ್ದಾರೆ.

ಬಾಲಿವುಡ್‌, ಕಾಲಿವುಡ್‌ನಲ್ಲಿ ನಟಿಸಿದ್ದ ಪೂಜಾ ಅವರ ಸಿನಿ ಬದುಕಿಗೆ ತಿರುವು ನೀಡಿದ್ದ ಸಿನಿಮಾ, ಯೋಗರಾಜ್‌ ಭಟ್‌ ನಿರ್ದೇಶನದ ‘ಮುಂಗಾರು ಮಳೆ’. ಈ ಸಿನಿಮಾ ಬಳಿಕ ‘ಮಿಲನ’, ‘ಕೃಷ್ಣ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಪೂಜಾ ನಟಿಸಿದರು. ಜೊತೆಗೆ ತಮಿಳು ಸಿನಿಮಾಗಳಲ್ಲೂ ಕಾಣಿಸಿಕೊಂಡರು. ‘ದಂಡುಪಾಳ್ಯ’, ‘ಅಭಿನೇತ್ರಿ’ ಸಿನಿಮಾಗಳ ಬಳಿಕ ಸಣ್ಣ ಬ್ರೇಕ್‌ ತೆಗೆದುಕೊಂಡಿದ್ದರು. 2020ರ ಆರಂಭದಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಈ ಅವಧಿಯಲ್ಲಿ ನಟನೆಯಿಂದ ದೂರವೇ ಉಳಿದಿದ್ದರು. ಇತ್ತೀಚೆಗೆ ‘ಸಂಹಾರಿಣಿ’ ಎಂಬ ಚಿತ್ರದಲ್ಲಿ ಪೂಜಾ ಕಾಣಿಸಿಕೊಂಡಿದ್ದರು. 

ಕನ್ನಡ ಕಲಿಕೆ

ಸಿನಿಮಾದಿಂದ ಬ್ರೇಕ್‌ ತೆಗೆದುಕೊಂಡಿದ್ದ ಪೂಜಾ ಗಾಂಧಿ ಅವರು ಕನ್ನಡ ಕಲಿಕೆಯತ್ತ ಆಸಕ್ತಿ ತೋರಿದ್ದರು. ಕಳೆದ ಎರಡು ವರ್ಷಗಳಿಂದ ಕನ್ನಡದ ಅಕ್ಷರಗಳು, ವರ್ಣಮಾಲೆಯನ್ನು ಮಕ್ಕಳಂತೆ ಅವರು ಅಭ್ಯಾಸ ಮಾಡಿದ್ದಾರೆ. ಹಂತಹಂತವಾಗಿ ವಾಕ್ಯ ರಚನೆಯನ್ನೂ ಅವರು ಕಲಿತಿದ್ದಾರೆ. ಕನ್ನಡದ ಮೇಲಿನ ಅವರ ಪ್ರೀತಿಗೆ ಅವರೇ ಕನ್ನಡದಲ್ಲಿ ಬರೆದ ಮದುವೆ ಆಮಂತ್ರಣವೇ ಸಾಕ್ಷ್ಯವಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT