ಗುರುವಾರ , ಜನವರಿ 27, 2022
21 °C

ರಾಧೆ ಶ್ಯಾಮದಲ್ಲಿ ನನ್ನದು ಸವಾಲಿನ ಪಾತ್ರ –ಪೂಜಾ ಹೆಗ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ರಾಧೆ ಶ್ಯಾಮ ಚಿತ್ರದಲ್ಲಿನ ನನ್ನ ಪಾತ್ರ ಸವಾಲಿನಿಂದ ಕೂಡಿತ್ತು ಎಂದು ಈ ಚಿತ್ರದ ನಾಯಕಿ ಪೂಜಾ ಹೆಗ್ಡೆ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕಳೆದ 5 ವರ್ಷಗಳಲ್ಲಿ ಇಂತಹ ಸವಾಲಿನ ಪಾತ್ರ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ರಾಧೆ ಶ್ಯಾಮ ಸಿನಿಮಾ ತೆಲುಗು ಚಿತ್ರರಂಗದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಎಂದು ಅಭಿಪ್ರಾಯಪಟ್ಟರು. ಈ ದೃಶ್ಯ ಕಾವ್ಯವನ್ನು ನೋಡಲು ಪ್ರೇಕ್ಷಕರು ಕಾತುರರಾಗಿದ್ದಾರೆ ಎಂದು ಪೂಜಾ ಹೇಳಿದರು.

ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ಇದೇ ಜನವರಿ 14ಕ್ಕೆ ಸಿನಿಮಾ ಬಿಡುಗಡೆಯಾಗಬೇಕಿತ್ತು. ಪ್ರಭಾಸ್‌ ನಾಯಕ ನಟನಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು