ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಗುಣಮುಖರಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ನಾನು ಚೇತರಿಸಿಕೊಂಡಿದ್ದೇನೆ. ಕೊನೆಗೂ ನೆಗೆಟಿವ್ ವರದಿ ಬಂದಿದೆ. ಕೊರೊನಾವನ್ನು ಒದ್ದು ಕಳುಹಿಸಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಈ ಚಮತ್ಕಾರ ಆಗಿದೆ ಅನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸುರಕ್ಷಿತವಾಗಿರಿ ಆಗಿರಿ’ ಎಂದಿದ್ದಾರೆ.

ಏಪ್ರಿಲ್ ಕೊನೆಯ ವಾರದಲ್ಲಿ ಅವರು ಸೋಂಕಿಗೆ ತುತ್ತಾಗಿದ್ದರು. ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದರು.

ಪೂಜಾ ಅವರಿಗೆ ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅಖಿಲ್ಅಕ್ಕಿನೇನಿ ನಟನೆಯ ‘ಮೋಸ್ಟ್ ಎಲಿಜೆಬಲ್ ಬ್ಯಾಚುಲರ್’ ಚಿತ್ರದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಪಾತ್ರದಲ್ಲಿ ಅವರು ಇದ್ದಾರೆ. ಚಿರಂಜೀವಿ ಅಭಿನಯದ ಆಚಾರ್ಯ ಸಿನಿಮಾದಲ್ಲಿ ರಾಮ್ ಚರಣ್ ಅವರಿಗೆ ಜೋಡಿಯಾಗಿ ಪೂಜಾ ನಟಿಸುತ್ತಿದ್ದಾರೆ. ಅದು ನೀಲಾಂಬರಿ ಎಂಬ ಅತಿಥಿ ಪಾತ್ರವಾಗಿದೆ. ಪ್ರಭಾಸ್ ಅವರ ಜತೆಗೆ ರಾಧೇ ಶ್ಯಾಂ ಚಿತ್ರದಲ್ಲಿ ಪ್ರಧಾನ ಭೂಮಿಕೆಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.