ಗುರುವಾರ , ಮೇ 19, 2022
20 °C

‘ಐಟಂ‘ ಹಾಡಿನ ಸಂಭಾವನೆ ಹೆಚ್ಚಿಸಿಕೊಂಡ ನಟಿ ಪೂಜಾ ಹೆಗ್ದೆ! ಇಲ್ಲಿದೆ ಮಾಹಿತಿ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತಮಿಳು ಹಾಗೂ ತೆಲುಗಿನಲ್ಲಿ ಬೇಡಿಕೆ ನಟಿಯಾಗಿರುವ ಕನ್ನಡತಿ ಪೂಜಾ ಹೆಗ್ಡೆ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದು ಐಟಂ ಹಾಡಿಗೂ ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. 

ಪೂಜಾ ಹೆಗ್ಡೆ ಅವರ ಆಪ್ತರು ನಟಿಯು ಪಡೆಯುತ್ತಿರುವ ಸಂಭಾವನೆಗೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸುದ್ದಿ ಟಾಲಿವುಡ್‌ ಹಾಗೂ ಕಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿದೆ.

ಕೋವಿಡ್‌ ನಂತರದ ಕಾಲಘಟ್ಟದಲ್ಲಿ ಬಾಲಿವುಡ್ ಹಾಗೂ ಟಾಲಿವುಡ್‌ ನಟ ನಟಿಯರು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಈ ಸಾಲಿಗೆ ಪೂಜಾ ಹೆಗ್ಡೆ ಕೂಡ ಸೇರಿದ್ದಾರೆ.

ಸದ್ಯ ಪೂಜಾ ಹೆಗ್ಡೆ ಸಿನಿಮಾವೊಂದರಲ್ಲಿ ನಟಿಸಲು ₹ 3 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಇನ್ನು ಐಟಂ ಹಾಡಿಗೆ ₹ 1.5 ಕೋಟಿ ಪಡೆಯುತ್ತಿದ್ದಾರೆ ಎಂದು ಆಪ್ತರು ಹೇಳಿದ್ದಾರೆ. 

  ಇದನ್ನೂ ಓದಿ: 

ಸದ್ಯ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪೂಜಾ ಹೆಗ್ಡೆ ತೆಲುಗಿನಲ್ಲಿ ನಟ ಚಿರಂಜೀವಿ, ರಾಮ್‌ ಚರಣ್ ಅಭಿನಯದ 'ಆಚಾರ್ಯ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತೊಂದು ತೆಲುಗಿನ ‘ಎಫ್‌3‘ ಸಿನಿಮಾದಲ್ಲಿ ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  

ಇತ್ತೀಚೆಗೆ ಬಿಡುಗಡೆಯಾದ ‘ರಾಧೆ–ಶ್ಯಾಮ‘ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಾಣಲಿಲ್ಲ. ಈ ಚಿತ್ರದಲ್ಲಿ ಪ್ರಭಾಸ್‌–ಪೂಜಾ ಹೆಗ್ದಡೆ ನಟಿಸಿದ್ದರು.

ಇದನ್ನೂ ಓದಿ: ಡಾ.ರಾಜ್‌ಕುಮಾರ್‌ 16ನೇ ವರ್ಷದ ಪುಣ್ಯಸ್ಮರಣೆ: ಬೊಮ್ಮಾಯಿ ಸೇರಿ ಗಣ್ಯರಿಂದ ನಮನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು