ಮಂಗಳವಾರ, ಆಗಸ್ಟ್ 9, 2022
23 °C

ಒಳ ಉಡುಪು ಧರಿಸದೆ ಬೀದಿಗೆ ಬಂದ ಪೂನಂ ಪಾಂಡೆ: ಸೆಲ್ಫಿಗೆ ಮುಗಿಬಿದ್ದ ಹುಡುಗರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬೋಲ್ಡ್‌ ಫೋಟೊಗಳು ಮತ್ತು ವಿಡಿಯೊಗಳ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿರುವ ನಟಿ, ರೂಪದರ್ಶಿ ಪೂನಂ ಪಾಂಡೆ ಇದೀಗ ಮತ್ತೊಮ್ಮೆ ನೆಟ್ಟಿಗರ ಟ್ರೋಲ್‌ಗೆ ಒಳಗಾಗಿದ್ದಾರೆ.

ಸಿನಿಮಾ, ಮಾಡೆಲಿಂಗ್‌ನಲ್ಲಿ ಅಷ್ಟೊಂದು ಸುದ್ದಿ ಮಾಡದ ಈ ನಟಿ, ವಿವಾದಗಳಿಂದಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ಇದೀಗ ಒಳ ಉಡುಪು ಹಾಕದೇ ರಸ್ತೆಗೆ ಬಂದು ನೆಟ್ಟಿಗರಿಂದ ಟ್ರೋಲ್‌ಗೆ ಒಳಗಾಗಿದ್ದಾರೆ. 

ಇತ್ತೀಚೆಗೆ ಪೂನಂ ಪಾಂಡೆ ಮುಂಬೈನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಬಿಳಿ ಬಣ್ಣದ ಕ್ರಾಪ್‌ಟಾಪ್‌ ಧರಿಸಿದ್ದ ಪೂನಂ ಪಾಂಡೆ ಒಳ ಉಡುಪು ಹಾಕಿರಲಿಲ್ಲ. ಇದೇ ವೇಳೆ ಅಭಿಮಾನಿಗಳು ಪೂನಂ ಜತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿ ಬಿದ್ದಿದ್ದಾರೆ. ಈ ವಿಡಿಯೊವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಪೂನಂ ವಿಡಿಯೊ ಗಮನಿಸಿದ್ದ ಅಭಿಮಾನಿಗಳು ನಾನಾ ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. ನಾವು ನಿಮ್ಮ ಅಭಿಮಾನಿಗಳು ಹೌದು, ನೀವು ಸಮಾಜದಲ್ಲಿ ಸ್ವಲ್ಪವಾದರೂ ಗೌರವ ಉಳಿಸಿಕೊಳ್ಳಿ ಎಂದು ಕೆಲವರು ಹೇಳಿದ್ದಾರೆ. ಒಳ್ಳೆಯ ಬಟ್ಟೆ ಹಾಕಿಕೊಂಡು ಗೌರವದಿಂದ ಬದುಕಿ ಎಂದು ನೆಟ್ಟಿಗರು ಹೇಳಿದ್ದಾರೆ.

ಸಾಕಷ್ಟು ನೆಟ್ಟಿಗರು ಪೂನಂ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಈ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಟ್ರೋಲ್‌ ಮಾಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು