ಮಂಗಳವಾರ, ಜುಲೈ 5, 2022
25 °C

ಮದುವೆಯಾದ ಕೆಲವೇ ದಿನಗಳಲ್ಲಿ ಪತಿ ವಿರುದ್ಧ ಪೂನಂ ಪಾಂಡೆ ದೂರು, ಸ್ಯಾಮ್‌ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Poonam Pandey

ಇತ್ತೀಚೆಗಷ್ಟೇ ಮದುವೆಯಾಗಿರುವ ನಟಿ ಪೂನಂ ಪಾಂಡೆ ದಾಂಪತ್ಯದಲ್ಲಿ ಬಿರುಕು ಮೂಡಿದ್ಯಾ? ಇತ್ತೀಚಿನ ವರದಿಯೊಂದು ಅಂತಹ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪೂನಂ ಪಾಂಡೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಕೆಯ ಪತಿ ಸ್ಯಾಮ್‌ ಅಹ್ಮದ್‌ ಬಾಂಬೆಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪತಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಪೂನಂ ಪಾಂಡೆ ಇತ್ತೀಚೆಗೆ ದೂರು ನೀಡಿದ್ದರು. ಈ ಜೋಡಿಗೆ ಸೆಪ್ಟೆಂಬರ್ 1ರಂದು ವಿವಾಹವಾಗಿತ್ತು.

ಪೂನಂ ಸದ್ಯ ದಕ್ಷಿಣ ಗೋವಾದ ಕೆನಕೋನಾ ಗ್ರಾಮದಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

ಪತಿ ಸ್ಯಾಮ್ ದೌರ್ಜನ್ಯ ಎಸಗಿದ್ದಲ್ಲದೆ, ಬೆದರಿಕೆಯನ್ನೂ ಒಡ್ಡಿದ್ದಾರೆ ಎಂದು ಸೋಮವಾರ ರಾತ್ರಿ ಪೂನಂ ದೂರು ನೀಡಿದ್ದರು. ಹೀಗಾಗಿ ಸ್ಯಾಮ್‌ರನ್ನು ಬಂಧಿಸಲಾಗಿದೆ ಎಂದು ಕೆನಕೋನಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ತುಕಾರಾಂ ಚವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ನಿಯಮ ಉಲ್ಲಂಘನೆ: ನಟಿ ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು

ಎರಡು ವರ್ಷಗಳಿಂದ ಲಿವ್–ಇನ್ ಸಂಬಂಧದಲ್ಲಿರುವ ಪೂನಂ ಮತ್ತು ಸ್ಯಾಮ್ ಬಾಂದ್ರಾದ ನಿವಾಸದಲ್ಲಿ ಸ್ನೇಹಿತರು, ಕುಟುಂಬದ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಈ ಬಗ್ಗೆ ಪೂನಂ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು.

ಮೇ ತಿಂಗಳಲ್ಲಿ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ್ದ ಆರೋಪದಲ್ಲಿ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು