ಬುಧವಾರ, ಜುಲೈ 6, 2022
22 °C

ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

. Updated:

ಅಕ್ಷರ ಗಾತ್ರ : | |

Prajavani

ನಟಿ ಪೂನಂ ಪಾಂಡೆ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಗೋವಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಆಕೆಯ ಪತಿ ಸ್ಯಾಮ್‌ ಅಹ್ಮದ್‌ಗೆ ಗೋವಾದ ಪ್ರಥಮದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

ಈ ಇಬ್ಬರು ಕಳೆದ ಎರಡು ವರ್ಷಗಳಿಂದಲೂ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಕಳೆದ ಜುಲೈನಲ್ಲಿ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಸೆಪ್ಟೆಂಬರ್‌ 10ರಂದು ಕುಟುಂಬದ ಸದಸ್ಯರ ಸಮ್ಮುಖದಲ್ಲಿಯೇ ಇಬ್ಬರೂ ಸಪ್ತಪದಿ ತುಳಿದಿದ್ದರು. ಆದರೆ, ಸೋಮವಾರ ರಾತ್ರಿ ನನ್ನ ಪತಿ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದರು. ಹಾಗಾಗಿ, ಸ್ಯಾಮ್‌ ಅವರನ್ನು ಪೊಲೀಸರು ಬಂಧಿಸಿದ್ದರು.

ಸಿನಿಮಾ ನಿರ್ಮಾಪಕರಾಗಿರುವ ಸ್ಯಾಮ್‌ಗೆ ₹ 20 ಸಾವಿರ ಶ್ಯೂರಿಟಿ ಇಟ್ಟುಕೊಂಡು ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಬುಧವಾರದಿಂದ ನಾಲ್ಕು ದಿನಗಳ ಕಾಲ ಠಾಣೆಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದೆಂದು ಕೋರ್ಟ್‌ ಸೂಚಿಸಿದೆ ಎಂದು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಪ್ರಸ್ತುತ ಪೂನಂ ದಕ್ಷಿಣ ಗೋವಾದ ಕೊನಕೋನಾ ಪ್ರದೇಶದಲ್ಲಿ ನಡೆಯುತ್ತಿರುವ ಸಿನಿಮಾದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು