ಭಾನುವಾರ, ಡಿಸೆಂಬರ್ 4, 2022
19 °C

ಗುಜರಾತ್‌: ಜನಪ್ರಿಯ ಗಾಯಕಿ ವೈಶಾಲಿ ಮೃತದೇಹ ಪತ್ತೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಗುಜರಾತ್‌ ರಾಜ್ಯದ ಜನಪ್ರಿಯ ಗಾಯಕಿ, ವೈಶಾಲಿ ಬುಲ್ಸಾರ ಅವರ ಮೃತದೇಹ ಪತ್ತೆಯಾಗಿದೆ ಎಂದು ಗುಜರಾತ್‌ ಪೊಲೀಸರು ತಿಳಿಸಿದ್ದಾರೆ.

34 ವರ್ಷದ ಮೈಶಾಲಿ, ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ಇದನ್ನೂ ಓದಿ: ₹60 ಲಕ್ಷ ಖರ್ಚು ಮಾಡಿ ಮನೆ ಮುಂದೆ ಅಮಿತಾಭ್ ಬಚ್ಚನ್ ಪ್ರತಿಮೆ ನಿಲ್ಲಿಸಿದ ಅಭಿಮಾನಿ

ಸೋಮವಾರ ಗುರ್ಜಾರ್‌ ಪರ್ಡಿ ತಾಲ್ಲೂಕಿನ ನಿರ್ಜನ ಪ್ರದೇಶದಲ್ಲಿ ವೈಶಾಲಿ ಅವರ ಕಾರಿನ ಹಿಂದಿನ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು