ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹು ಭಾಷಾ ನಟಿ ಚಿತ್ರಾ ಹೃದಯಾಘಾತದಿಂದ ನಿಧನ

Last Updated 21 ಆಗಸ್ಟ್ 2021, 6:46 IST
ಅಕ್ಷರ ಗಾತ್ರ

ಚೆನ್ನೈ:ಬಹು ಭಾಷಾ ನಟಿ ಚಿತ್ರಾ ಹೃದಯಾಘಾತದಿಂದ ಚೆನ್ನೈನಲ್ಲಿ ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಮಲಯಾಳಂ ಸೇರಿದಂತೆ ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿನೂರಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿದ್ದಾರೆ.

ಕೊಚ್ಚಿಯಲ್ಲಿಜನಿಸಿದ ಚಿತ್ರಾ ಬಾಲನಟಿಯಾಗಿ ಸಿನಿಮಾ ರಂಗಕ್ಕೆ ಪ್ರವೇಶಿಸಿದರು. ಕೆ. ಬಾಲಚಂದರ್‌ ನಿರ್ದೇಶನದ ’ಅಪೂರ್ವ ರಾಗಂಗಳ್‌’ ಸಿನಿಮಾದಲ್ಲಿ ಬಾಲ ನಟಿಯಾಗಿ ನಟಿಸಿದ್ದರು. ಈ ಚಿತ್ರ 1975ರಲ್ಲಿ ತೆರೆಕಂಡಿತ್ತು.

ಕನ್ನಡದಲ್ಲಿಸುಂದರ ಸ್ವಪ್ನಗಳು, ಅಜೇಯ್ - ವಿಜಯ್, ಕೃಷ್ಣ ಮೆಚ್ಚಿದ ರಾಧೆ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT