ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್ಲವೂ ‘ಪೌಡರ್‌ಮಯ’

Published 6 ಜುಲೈ 2024, 4:50 IST
Last Updated 6 ಜುಲೈ 2024, 4:50 IST
ಅಕ್ಷರ ಗಾತ್ರ

ಬಹುನಿರೀಕ್ಷಿತ ಹಾಸ್ಯ ಚಿತ್ರ ‘‍ಪೌಡರ್‌’  ಇದೀಗ ‘ಮಿಷನ್‌ ಘಮ ಘಮ’ ಎಂಬ ತನ್ನ ಮೊದಲ ಗೀತೆಯನ್ನು ಬಿಡುಗಡೆಗೊಳಿಸಿ ಸುದ್ದಿಯಲ್ಲಿದೆ. 

ಸಂಗೀತ ನಿರ್ದೇಶಕ ವಾಸುಕಿ ವೈಭವ್‌,  ಗಾಯಕ ಎಂ.ಸಿ.ಬಿಜ್ಜು ಅವರ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ ಮೊದಲ ಗೀತೆ ಇದಾಗಿದ್ದು, ತನ್ನ ವಿಭಿನ್ನವಾದ ಟ್ಯೂನ್‌ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಮಾಧುರ್ಯ ಗೀತೆಗಳಿಗೆ ಹೆಸರುವಾಸಿಯಾದ ವಾಸುಕಿ ವೈಭವ್‌ ರ್‍ಯಾಪ್‌ ಸಂಗೀತದಲ್ಲಿ ತನ್ನದೇ ಛಾಪು ಮೂಡಿಸಿದ್ದಾರೆ. 

ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್‌’ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ ‘ಪೌಡರ್‘

ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಗುವುದೇ? ‘ಪೌಡರ್‌’ ಹಿಂದಿನ ‘ಪವರ್‌’ ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಇದೇ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಉತ್ತರ ದೊರೆಯಲಿದೆ.

ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ ಮುಖ್ಯ ಭೂಮಿಕೆಯಲ್ಲಿರುವ‌ ‘ಪೌಡರ್’ ಚಿತ್ರಕ್ಕೆ ಜನಾರ್ದನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದಾರೆ. ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕ ಹಾಗೂ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT