ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Cinema | ‘ಪೌಡರ್‌’ ಪರೀಕ್ಷಿಸಿದ ದಿಗಂತ್‌!

Published 20 ಮೇ 2024, 22:30 IST
Last Updated 20 ಮೇ 2024, 22:30 IST
ಅಕ್ಷರ ಗಾತ್ರ

ದಿಗಂತ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಪೌಡರ್‌’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದ್ದು, ಸಿನಿಮಾ ಜುಲೈ 12ರಂದು ತೆರೆಕಾಣಲಿದೆ. 

ಜನಾರ್ದನ್ ಚಿಕ್ಕಣ್ಣ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಕಳೆದ ಸೆಪ್ಟೆಂಬರ್‌ನಲ್ಲಿ ಆರಂಭವಾಗಿತ್ತು. ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್‌’ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳೇ ಈ ಸಿನಿಮಾದ ಕಥೆ ಎಂದಿದೆ ಚಿತ್ರತಂಡ.

ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ದಿಗಂತ್‌ ನಾಯಕನಾಗಿ ನಟಿಸಿದ್ದು, ಶರ್ಮಿಳಾ ಮಾಂಡ್ರೆ, ಧನ್ಯಾ ರಾಮ್‌ಕುಮಾರ್‌ ಜೋಡಿಯಾಗಿದ್ದಾರೆ. ರಂಗಾಯಣ ರಘು, ನಾಗಭೂಷಣ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT