ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಗಂತ್‌ಗೆ ‘ಪೌಡರ್‌’ ಹಚ್ಚಲಿರುವ ಶರ್ಮಿಳಾ!

Published 28 ಆಗಸ್ಟ್ 2023, 12:30 IST
Last Updated 28 ಆಗಸ್ಟ್ 2023, 12:30 IST
ಅಕ್ಷರ ಗಾತ್ರ

ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ ಮುಖ್ಯಭೂಮಿಕೆಯಲ್ಲಿರುವ ‘ಪೌಡರ್‌’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಕೆಆರ್‌ಜಿ ಸ್ಟುಡಿಯೋಸ್‌ ಹಾಗೂ ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಒಟ್ಟಾಗಿ ನಿರ್ಮಿಸುತ್ತಿರುವ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನಟ ಕಿಚ್ಚ ಸುದೀಪ್ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ.

‘ಗುಲ್ಟು’ ಸಿನಿಮಾದ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಈ ಚಿತ್ರಕ್ಕೆ ಆ್ಯಕ್ಷನ್‌–ಕಟ್‌ ಹೇಳುತ್ತಿದ್ದಾರೆ. ‘ಇದೊಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್‌ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂಬುದೇ ಚಿತ್ರ’ ಎಂದರು ನಿರ್ದೇಶಕರು.

ಅನಿರುದ್ಧ ಆಚಾರ್ಯ, ರಂಗಾಯಣ ರಘು, ಅಚ್ಯುತ ಕುಮಾರ್, ರವಿಶಂಕರ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿದ್ದು, ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT