ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಕೆ.ಆರ್‌.ಜಿ.ಯಿಂದ ‘ಆದಿಪುರುಷ್’ ಬಿಡುಗಡೆ

Published 12 ಜೂನ್ 2023, 10:52 IST
Last Updated 12 ಜೂನ್ 2023, 10:52 IST
ಅಕ್ಷರ ಗಾತ್ರ

ಸ್ಯಾಂಡಲ್‌ವುಡ್‌ನ ಇತ್ತೀಚಿನ ಹಿಟ್‌ ಸಿನಿಮಾಗಳಾದ ‘ಕೆ.ಜಿ.ಎಫ್’ ಸರಣಿ, ‘ಕಾಂತಾರ’, ‘777 ಚಾರ್ಲಿ’, ‘ಗಂಧದಗುಡಿ’ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿರುವ ಕೆ.ಆರ್.ಜಿ ಸ್ಟುಡಿಯೋಸ್ ಇದೀಗ ಪ್ರಭಾಸ್‌ ನಟನೆಯ ‘ಆದಿಪುರುಷ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲಿದೆ.

‘ಆದಿಪುರುಷ್ ಚಿತ್ರದ ಕರ್ನಾಟಕದ ವಿತರಣೆ ನಮಗೆ ಸಿಕ್ಕಿರುವುದು ಬಹಳ ಹೆಮ್ಮೆಯ ಸಂಗತಿ. ಜೂನ್‌ 16ರಂದು ಸಿನಿಮಾ ತೆರೆಕಾಣುತ್ತಿದ್ದು, 3ಡಿಯಲ್ಲೂ ಚಿತ್ರವನ್ನು ಪ್ರೇಕ್ಷಕರು ವೀಕ್ಷಿಸಬಹುದಾಗಿದೆ ’ ಎಂದಿದ್ದಾರೆ ಹೊಂಬಾಳೆ ಫಿಲ್ಮ್ಸ್‌ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕ ಕಾರ್ತಿಕ್ ಗೌಡ.

‘ರಾಮಾಯಣ’ದ ಕಥಾಹಂದರವಿರುವ ಈ ಚಿತ್ರ ಟಿ. ಸೀರೀಸ್ ಮತ್ತು ರೆಟ್ರೋಫಿಲ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿದೆ. ಈ ಚಿತ್ರಕ್ಕೆ ಕಥೆ ಹೆಣೆದು ನಿರ್ದೇಶನ ಮಾಡುತ್ತಿರುವುದು ಓಂ ರಾವತ್. ‘ಆದಿಪುರುಷ್’ ಚಿತ್ರವು ಏಕಕಾಲಕ್ಕೆ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗಿದೆ. ಕನ್ನಡ, ಮಲಯಾಳಂ, ತಮಿಳು ಭಾಷೆಗಳಿಗೂ ಸಿನಿಮಾ ಡಬ್‌ ಆಗಿದೆ. ಚಿತ್ರದ ತಾರಾಗಣದಲ್ಲಿ ಪ್ರಭಾಸ್, ಕ್ರಿತಿ ಸನೋನ್, ಸೈಫ್ ಅಲಿ ಖಾನ್, ಸನ್ನಿ ಸಿಂಗ್, ದೇವದತ್ತ ನಾಗೇ ಮುಂತಾದ ಕಲಾವಿದರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT