ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂಜಾ ಹೆಗ್ಡೆ–ಪ್ರಭಾಸ್ ಅಭಿನಯದ ‘ರಾಧೆ ಶ್ಯಾಮ್‘ ಮಾರ್ಚ್‌ನಲ್ಲಿ ಬಿಡುಗಡೆ

Last Updated 2 ಫೆಬ್ರುವರಿ 2022, 7:08 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌ಆರ್‌ಆರ್ ಚಿತ್ರದ ಬಿಡುಗಡೆ ದಿನಾಂಕ ಪ್ರಕಟವಾದ ಬೆನ್ನಲ್ಲೇ, ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ‘ರಾಧೆ ಶ್ಯಾಮ್‘ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಮಾರ್ಚ್ 11ರಂದು ಚಿತ್ರ ಬಿಡುಗಡೆಯಾಗುತ್ತಿರುವ ಕುರಿತು ನಟ ಪ್ರಭಾಸ್ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಭಾಸ್ ಈ ಚಿತ್ರದಲ್ಲಿ ವಿಕ್ರಮಾದಿತ್ಯನ ಪಾತ್ರದಲ್ಲಿ ಮತ್ತು ಪೂಜಾ ಹೆಗ್ಡೆ ಅವರ ಪ್ರೇಯಸಿ ಪಾತ್ರದಲ್ಲಿ ನಟಿಸಿದ್ದಾರೆ.

ರಾಧೆ ಶ್ಯಾಮ್ ಚಿತ್ರ ಈ ಮೊದಲು ಜನವರಿ 14ರಂದು ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ, ಕೋವಿಡ್ ನಿರ್ಬಂಧದ ಬಳಿಕ ಚಿತ್ರ ಬಿಡುಗಡೆ ಮುಂದೂಡಲಾಗಿದ್ದು, ಹೊಸದಾಗಿ ದಿನಾಂಕ ಪ್ರಕಟಸಲಾಗಿದೆ.

ರಾಧಾ ಕೃಷ್ಣ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಗುಲ್ಶನ್ ಕುಮಾರ್ ಮತ್ತು ಟಿ–ಸಿರೀಸ್ ಪ್ರಸ್ತುತಪಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT