ಮಂಗಳವಾರ, ಡಿಸೆಂಬರ್ 6, 2022
20 °C

ಕನ್ನಡದ ಕಾಂತಾರಕ್ಕೆ ಪ್ರಭಾಸ್ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ರಿಷಭ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ‘ಕಾಂತಾರ’ಚಿತ್ರವನ್ನು ತೆಲುಗು ನಟ ಪ್ರಭಾಸ್‌ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಭಾಸ್‌, ಕಾಂತಾರ ಸಿನಿಮಾವನ್ನು ಪೂರ್ತಿಯಾಗಿ ಎಂಜಾಯ್‌ ಮಾಡಿದ್ದೇನೆ. ಕ್ಲೈಮ್ಯಾಕ್ಸ್‌ ಅದ್ಬುತವಾಗಿದೆ. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ ಎಂದಿದ್ದಾರೆ.

ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿರುವ ಕಾಂತಾರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ‘ಕೆಜಿಎಫ್’, 'ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್‌, ಕಾಂತಾರದ ನಿರ್ಮಾಪಕರು. ಪ್ರಭಾಸ್ ಅಭಿನಯದ ‘ಸಲಾರ್’ ಎಂಬ ಪ್ಯಾನ್ ಇಂಡಿಯಾ ಸಿನಿಮಾವನ್ನು ಇದೇ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.

ರಮ್ಯಾ, ರಕ್ಷಿತ್ ಶೆಟ್ಟಿ, ಅಮೂಲ್ಯ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕರಾವಳಿ ಭಾಗದ ವಿಶಿಷ್ಟ ಆಚರಣೆ ಭೂತ ಕೋಲಾವನ್ನು ಕಟ್ಟಿಕೊಟ್ಟಿರುವ ರೀತಿ, ಕ್ಲೈಮ್ಯಾಕ್ಸ್‌ನಲ್ಲಿ ರಿಷಭ್ ಶೆಟ್ಟಿ ನಟನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಭ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು