ಶುಕ್ರವಾರ, ಜನವರಿ 28, 2022
25 °C

‘ಆದಿಪುರುಷ್‌’ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡ ನಟ ಪ್ರಭಾಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಓಂ ರಾವತ್ ನಿರ್ದೇಶನದ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರ ಸೆಟ್ಟೇರಿದ್ದು, ಚಿತ್ರಕ್ಕಾಗಿ ನಟ ಪ್ರಭಾಸ್‌ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಮಾಯಣ ಆಧಾರಿತ ‘ಆದಿಪುರುಷ್’ ಸಿನಿಮಾ ಬಹುಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ನಾಯಕನಾಗಿ ರಾಮನ ಪಾತ್ರದಲ್ಲಿ ಪ್ರಭಾಸ್ ನಟಿಸುತ್ತಿದ್ದಾರೆ. ಬಾಲಿವುಡ್‌ ನಟ ಸೈಫ್ ಅಲಿಖಾನ್ ರಾವಣನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಸೀತೆ ಪಾತ್ರದಲ್ಲಿ ಕೃತಿ ಸನೊನ್ ಕಾಣಿಸಿಕೊಂಡಿದ್ದಾರೆ.

ಸದ್ಯ ಚಿತ್ರೀಕರಣದಲ್ಲಿ ತೊಡಗಿರುವ ಪ್ರಭಾಸ್‌, ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಪ್ರಭಾಸ್, ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಾಯಕಿಯಾಗಿ ಶ್ರುತಿ ಹಾಸನ್‌ ಅಭಿನಯಿಸಲಿದ್ದಾರೆ.  

ಪ್ರಭಾಸ್‌ ಮತ್ತು ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ರಾಧೆ ಶ್ಯಾಮ್’ ಕೊರೊನಾದಿಂದಾಗಿ ಬಿಡುಗಡೆ ದಿನಾಂಕ ಬಿಡುಗಡೆ ದಿನಾಂಕವನ್ನು ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ... ಹೆಣ್ಣು ಮಕ್ಕಳನ್ನು ಗೌರವಿಸದವರು ರಾಕ್ಷಸರು: ನಟ ಜಗ್ಗೇಶ್‌ ಆಕ್ರೋಶ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು