ಸೋಮವಾರ, ನವೆಂಬರ್ 29, 2021
20 °C

ಪ್ರಭಾಸ್, ಪೂಜಾ ಹೆಗ್ಡೆ ನಟನೆಯ ಬಹುನಿರೀಕ್ಷಿತ ರಾಧೆ ಶ್ಯಾಮ್ ಟೀಸರ್ ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೆಲುಗು ನಟ ಪ್ರಭಾಸ್ ಮತ್ತು ನಟಿ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ರಾಧೆ ಶ್ಯಾಮ್ ಟೀಸರ್ ಪ್ರೇಮಿಗಳ ದಿನಾಚರಣೆಯಂದು ಬಿಡುಗಡೆಗೊಂಡಿದೆ.

ಇದೇ ಸಂದರ್ಭದಲ್ಲಿ ಬಿಗ್ ಬಜೆಟ್ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಲಾಗಿದೆ. ರಾಧೆ ಶ್ಯಾಮ್ ಚಿತ್ರ ಜುಲೈ 30ರಂದು ತೆರೆಗೆ ಅಪ್ಪಳಿಸಲಿದೆ.

ಪ್ರಸ್ತುತ ಚಿತ್ರದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ರೋಮ್ಯಾಂಟಿಕ್ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದು, ಅಭಿಮಾನಿಗಳಲ್ಲಿ ಹೆಚ್ಚಿನ ಕುತೂಹಲವನ್ನು ಕೆರಳಿಸಿದೆ. ರಾಧೆ ಶ್ಯಾಮ್ ಕನ್ನಡದ ಟೀಸರ್ ಅನ್ನು ನಟಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ: 

ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಆಕ್ಷ್ಯನ್ ಕಟ್ ಹೇಳಿದ್ದು, ಈ ಚಿತ್ರವನ್ನು ಗೋಪಿ ಕೃಷ್ಣ ಮೂವೀಸ್, ಯುವಿ ಕ್ರಿಯೇಷನ್ಸ್ ಮತ್ತು ಟಿ ಸಿರೀಸ್ ನಿರ್ಮಿಸುತ್ತಿದೆ. ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಭಾಗ್ಯಶ್ರೀ, ಮುರ್ಲಿ ಶರ್ಮಾ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸಶಾ ಛೆಟ್ರಿ, ಸತ್ಯನ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಧೆ ಶ್ಯಾಮ್ ಕನ್ನಡ ಟೀಸರ್ ಮಿಸ್ ಮಾಡದೇ ನೋಡಿ:

ಟ್ವಿಟರ್‌ನಲ್ಲಿ ರಾಧೆ ಶ್ಯಾಮ್ ಬಿಡುಗಡೆ ದಿನಾಂಕ ಪ್ರಕಟಿಸಿದ ಪ್ರಭಾಸ್:
 

ರಾಧೆ ಶ್ಯಾಮ್ ಬಗ್ಗೆ ನಟಿ ಪೂಜಾ ಹೆಗ್ಡೆ ಟ್ವೀಟ್:

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು