ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಭಾಸ್‌ ನಟನೆಯ ‘ಸಲಾರ್‌‘ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆ

Last Updated 8 ಏಪ್ರಿಲ್ 2023, 12:47 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಶಾಂತ್‌ ನೀಲ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಸಲಾರ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದರಿಂದ ಪ್ರಭಾಸ್‌ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ.

ಸಿನಿಮಾ 2023ರ ಸೆ.28ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಟ್ವೀಟ್‌ ಮಾಡಿ ಘೋಷಣೆ ಮಾಡಿದೆ.

ವಿಜಯ್‌ ಕಿರಗಂದೂರು ತಮ್ಮ ಹೊಂಬಾಳೆ ಫಿಲ್ಮ್ಸ್‌ ಸಂಸ್ಥೆಯಡಿ ಸಲಾರ್‌ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ₹400 ಕೋಟಿಗೂ ಮೀರಿದ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ತನ್ನ ಹೈವೋಲ್ಟೇಜ್ ಆ್ಯಕ್ಷನ್ ದೃಶ್ಯಗಳಿಂದ ಸಿನಿಮಾ ಸಾಕಷ್ಟು ಸುದ್ದಿಯಲ್ಲಿದೆ.

‘ಸಲಾರ್’ ಪಕ್ಕಾ ಆ್ಯಕ್ಷನ್ ಚಿತ್ರವಾಗಿದ್ದು ಭಾರತವಲ್ಲದೆ, ಯೂರೋಪ್, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣವಾಗಿದೆ. ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ.

ಈ ಚಿತ್ರವು ಐದು ಭಾಷೆಗಳಲ್ಲಿ ಮೂಡಿ ಬರಲಿದ್ದು, ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಖ್ಯಾತ ಕಲಾವಿದರ ದಂಡೇ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT