ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಉಲ್ಬಣದ ನಡುವೆಯೂ ನಿಗದಿಯಂತೆ ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ತೆರೆಗೆ

Last Updated 3 ಜನವರಿ 2022, 11:26 IST
ಅಕ್ಷರ ಗಾತ್ರ

ದೇಶದಲ್ಲಿ ಕೊರೊನಾ ವೈರಸ್ ರೂಪಾಂತರ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಿಡುಗಡೆಗೆ ಸಿದ್ಧವಾಗಿರುವ ಅನೇಕ ಸಿನಿಮಾಗಳ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ. ಬಹುನಿರೀಕ್ಷಿತ ‘ಆರ್ಆರ್ಆರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಕೂಡ ಮುಂದೂಡಲಾಗಿದೆ. ಈ ಮಧ್ಯೆ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಕುರಿತು ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿದೆ.

ಅಂದುಕೊಂಡಂತೆ ನಡೆದರೆ ಜನವರಿ 14ಕ್ಕೆ ರಾಧೆ ಶ್ಯಾಮ್ ಸಿನಿಮಾ ಚಿತ್ರಮಂದಿರಗಳಿಗೆ ಅಪ್ಪಳಿಸಲಿದೆ. ಈ ಮಧ್ಯೆ ಕೋವಿಡ್-19 ಉಲ್ಬಣದಿಂದಾಗಿ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಇದೆಲ್ಲದಕ್ಕೂ ಚಿತ್ರತಂಡ ತೆರೆ ಎಳೆದಿದ್ದು, ನಿಗದಿಯಂತೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ.

ಪ್ರಚಾರಕ ವಂಶಿ ಶೇಖರ್ ಟ್ವೀಟ್ ಮಾಡಿದ್ದು, 'ರಾಧೆ ಶ್ಯಾಮ್ ಚಿತ್ರದ ಬಿಡುಗಡೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಜ.14 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ವದಂತಿಗಳನ್ನು ನಂಬಬೇಡಿ' ಎಂದು ಯುವಿ ಕ್ರಿಯೇಷನ್ಸ್‌ ಅನ್ನು ಟ್ಯಾಗ್ ಮಾಡಿದ್ದಾರೆ.

ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಯುವಿ ಕ್ರಿಯೇಷನ್ಸ್’ ಕೂಡ ಪೋಸ್ಟರ್ ಹಂಚಿಕೊಂಡಿದ್ದು, ‘ಈ ಹೊಸ ವರ್ಷಕ್ಕೆ ಪ್ರೀತಿ ಮತ್ತು ವಿಧಿ ನಡುವಿನ ದೊಡ್ಡ ಯುದ್ಧಕ್ಕೆ ಸಾಕ್ಷಿಯಾಗಿರಿ’ ಎಂಬ ಕ್ಯಾಪ್ಷನ್ ನೀಡಿದೆ.

ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಆಕ್ಷ್ಯನ್ ಕಟ್ ಹೇಳಿದ್ದು, ಈ ಚಿತ್ರವನ್ನು ಗೋಪಿ ಕೃಷ್ಣ ಮೂವೀಸ್, ಯುವಿ ಕ್ರಿಯೇಷನ್ಸ್ ಮತ್ತು ಟಿ ಸಿರೀಸ್ ನಿರ್ಮಿಸುತ್ತಿದೆ. ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಭಾಗ್ಯಶ್ರೀ, ಮುರ್ಲಿ ಶರ್ಮಾ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸಶಾ ಛೆಟ್ರಿ, ಸತ್ಯನ್ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕಳೆದ ವರ್ಷ ಬಿಡುಗಡೆಯಾಗಿದ್ದ ಚಿತ್ರದ ಟ್ರೈಲರ್‌ಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರೊಮ್ಯಾಂಟಿಕ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರವು ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ತೆರೆಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT