ಮೋಸದ ಕರೆಗಳು ಹೇಗೆಲ್ಲ ಇರುತ್ತವೆ ಮತ್ತು ಅಮಾಯಕರು ಹೇಗೆ ವಂಚನೆಗೆ ಒಳಗಾಗುತ್ತಾರೆ ಎಂದು ಹೇಳಿದೆ ರಾಂಚಿ. ಈ ಚಿತ್ರ ನ. 11ರಂದು ತೆರೆಗೆ ಬರಲಿದೆ.

ರುದ್ರಾನಂದ ಆರ್.ಎನ್. ಹಾಗೂ ಅರುಣ್ ಕುಮಾರ್ ಎನ್. ನಿರ್ಮಾಣದ, ಶಶಿಕಾಂತ್ ಗಟ್ಟಿ ನಿರ್ದೇಶನದ, ನೈಜಘಟನೆ ಆಧಾರಿತ ‘ರಾಂಚಿ’ ಚಿತ್ರದ ಟೀಸರ್ ಸಾಕಷ್ಟು ಕುತೂಹಲ ಹುಟ್ಟಿಸಿದೆ.

ಈ ಕಥೆಗೆ ಮೂಲವೇನು ಎಂಬ ಪ್ರಶ್ನೆಗೆ ನಿರ್ದೇಶಕರು ಹೇಳಿದ್ದಿಷ್ಟು. ‘ನಾನು ಐಪಿಸಿ ಸೆಕ್ಷನ್–300 ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದೆ. ಆಗ ನನಗೆ ರಾಂಚಿಯಿಂದ ಒಂದು ಕರೆ ಬಂತು. ನೀವು ರೈಲ್ವೆ ಇಲಾಖೆ ಕುರಿತು ಒಂದು ಸಾಕ್ಷ್ಯಚಿತ್ರಮಾಡಿಕೊಡಬೇಕು. ರಾಂಚಿಗೆ ಬನ್ನಿ ಎಂದರು. ಇದು ಸರ್ಕಾರದಿಂದ ಬಂದಿರುವ ಕರೆ ಎಂದು ತಿಳಿದು ಸಂತೋಷವಾಯಿತು. ಆಮೇಲೆ ಯೋಚನೆ ಮಾಡಿದೆ. ಸರ್ಕಾರ ಇಂತಹ ವಿಷಯವನ್ನು ಟೆಂಡರ್ ಮೂಲಕ ಕರೆಯುತ್ತಾರೆ. ಇದು ಸುಳ್ಳು ಇರಬಹುದು ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಕರೆ ಮಾಡಿದೆ. ಅವರು ಇದೆಲ್ಲಾ ಸುಳ್ಳು. ನೀವು ಇಲ್ಲಿಗೆ ಬರಬೇಡಿ ಎಂದರು. ಈ ರೀತಿ ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಈ ರೀತಿಯ ಕರೆಯಿಂದ ಮೋಸ ಹೋಗಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ‘ರಾಂಚಿ’ ಸಿನಿಮಾ ಮಾಡಿದ್ದೇವೆ’ ಎಂದರು.

‘ನಾಯಕ ಪ್ರಭು ಮುಂಡ್ಕರ್ ಕಥೆ ಕೇಳಿ ನಟಿಸಲು ಒಪ್ಪಿದರು. ರುದ್ರಾನಂದ ಹಾಗೂ ಅರುಣ್ ಕುಮಾರ್ ನಿರ್ಮಾಣಕ್ಕೆ ಮುಂದಾದರು. ರಾಂಚಿಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ. 2020ರಲ್ಲೇ ಸೆನ್ಸಾರ್ ಆಗಿತ್ತು. ಕೊರೊನ ಕಾರಣದಿಂದ ಬಿಡುಗಡೆ ವಿಳಂಬವಾಯಿತು’ ಎಂದರು.

ದಿವ್ಯ ಉರುಡಗ, ಟೋಟ ರಾಯ್ ಚೌಧರಿ, ಆರತಿ ನಾಯರ್, ಲಕ್ಷ್ಮಣ್ ಗೌಡ, ಸುರೇಶ್ ಹೆಬ್ಳೀಕರ್, ಉಷಾ ಭಂಡಾರಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.