ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಣ’ ನಾಯಕನಾದ ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್

Last Updated 2 ಜನವರಿ 2022, 11:22 IST
ಅಕ್ಷರ ಗಾತ್ರ

ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ‘ಗಣ’ ಚಿತ್ರದ ಮುಹೂರ್ತ ಇತ್ತೀಚೆಗೆ ಆರ್ ಪಿ ಸಿ ಲೇಔಟ್‌ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದರು.

ಆ್ಯಕ್ಷನ್‌ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರು.
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌.

ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT