ಮಂಗಳವಾರ, ಮೇ 17, 2022
30 °C

ಪ್ರಜ್ವಲ್‌ ದೇವರಾಜ್ ನಟನೆಯ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಫೆ. 5ಕ್ಕೆ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್‌ಪೆಕ್ಟರ್ ವಿಕ್ರಂ’ ಚಿತ್ರ ಫೆಬ್ರುವರಿ 5ಕ್ಕೆ ಬಿಡುಗಡೆಯಾಗಲಿದೆ. ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ ಚಿತ್ರದ ನಿರ್ದೇಶಕ ನರಸಿಂಹ. ಕಳೆದ ಮೂರು ವರ್ಷಗಳಿಂದ ಇನ್ಸ್‌ಪೆಕ್ಟರ್ ವಿಕ್ರಂ ಚಿತ್ರದ ಕೆಲಸ ನಡೆದಿತ್ತು, ಇದೀಗ ಚಿತ್ರಕ್ಕೆ ಬಿಡುಗಡೆಯ ಭಾಗ್ಯ ದೊರೆತಿದೆ.

ಈ ಸಿನಿಮಾದಂತೆ ಅನೇಕ ಕನ್ನಡ ಸಿನಿಮಾಗಳು ಬಿಡುಗಡೆಗಾಗಿ ಕಾಯುತ್ತಿವೆ. ಇನ್ಸ್‌ಪೆಕ್ಟರ್ ವಿಕ್ರಂ ನಂತರ ಒಂದೊಂದೇ ಸಿನಿಮಾಗಳು ತೆರೆ ಕಾಣುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಭಾವನಾ ಮೆನನ್, ರಘು ಮುಖರ್ಜಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚಾಲೆಜಿಂಗ್ ಸ್ಟಾರ್ ದರ್ಶನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಖ್ಯಾತ್ ಎ. ಆರ್‌. ಈ ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡಿದ್ದಾರೆ.

ಪ್ರಜ್ವಲ್‌ ಕೈಯಲ್ಲಿ ಈಗಾಗಲೇ ಮೂರ್ನಾಲ್ಕು ಸಿನಿಮಾಗಳಿವೆ. ಅವುಗಳ ಶೂಟಿಂಗ್ ಕೆಲಸಗಳು ಭರದಿಂದ ಸಾಗಿವೆ. ‘ಅರ್ಜುನ್‌ ಗೌಡ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು ಅದರಲ್ಲಿ ಪ್ರಜ್ವಲ್ ಅವರದ್ದು ಕಿಕ್‌–ಬಾಕ್ಸರ್ ಪಾತ್ರ. ಇವರ ‘ವೀರಂ’ ಚಿತ್ರ ಸದ್ಯದಲ್ಲೇ ಸೆಟ್ಟೇರಲಿದೆ. ಇದರೊಂದಿಗೆ ಪಿ.ಸಿ. ಶೇಖರ್ ಅವರ ಇನ್ನೂ ಹೆಸರಿಡದ ಚಿತ್ರದಲ್ಲೂ ಪ್ರಜ್ವಲ್ ನಟಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು