ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇದು ‘ಪ್ರಕರಣ’ದ ಗೀತೆ

Published : 24 ಆಗಸ್ಟ್ 2024, 0:19 IST
Last Updated : 24 ಆಗಸ್ಟ್ 2024, 0:19 IST
ಫಾಲೋ ಮಾಡಿ
Comments

ಬಹುತೇಕ ರಂಗಭೂಮಿ ಕಲಾವಿದರೇ ಸೇರಿ ನಿರ್ಮಿಸಿರುವ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸುಂದರ್.ಎಸ್ ನಿರ್ದೇಶನವಿರುವ ಚಿತ್ರವನ್ನು ಚಿಂತನ್ ಕಂಬಣ್ಣ ನಿರ್ಮಾಣ ಮಾಡಿದ್ದಾರೆ.

‘ಕ್ರೈಂ ಕಥಾಹಂದರ ಹೊಂದಿರುವ ಚಿತ್ರವಿದು. ಒಂದು ಪ್ರಕರಣದ ತನಿಖೆಯ ಸುತ್ತಾ ಸಾಗುವ ಕಥೆ. ಸಿದ್ಧಸೂತ್ರದಾಚೆಗೆ ಏನೋ ಮಾಡಬೇಕೆಂಬ ಕನಸಿನೊಂದಿಗೆ ಚಿತ್ರ ತಯಾರಾಗಿದೆ. ಶೀಘ್ರದಲ್ಲಿಯೇ ಚಿತ್ರ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದಿದ್ದಾರೆ ಚಿತ್ರದ ನಿರ್ದೇಶಕರು.

ಮಹೀನ್ ಕುಬೇರ್ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ. ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್.ಜೆ ಛಾಯಾಚಿತ್ರಗ್ರಹಣ, ಶಿವೋಂ ಸಂಗೀತ ನಿರ್ದೇಶನ ಮತ್ತು ನಾನಿಕೃಷ್ಣ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು, ಕನಕಪುರ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT