ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಶೂಟಿಂಗ್ ಇಂದಿನಿಂದ ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಹಾಕಿರುವ ಸೆಟ್‌ನಲ್ಲಿ ಆರಂಭಗೊಂಡಿದೆ.

ಈ ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್, ಟಾಲಿವುಡ್ ನಟ ರಾವ್ ರಮೇಶ್ ಕೂಡ ನಟಿಸುತ್ತಿದ್ದಾರೆ. ಈಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಅವರೇ ಟ್ವಿಟರ್‌ನಲ್ಲಿ ಶೂಟಿಂಗ್‌ನಲ್ಲಿ ಭಾಗವಹಿಸಿರುವ ಪೋಟೊಗಳನ್ನು ಹಂಚಿಕೊಂಡಿದ್ದಾರೆ. ಆದರೆ, ಅವರು ನಿಭಾಯಿಸುತ್ತಿರುವ ಪಾತ್ರ ಯಾವುದು ಎಂಬುದು ಕುತೂಹಲ ಮೂಡಿಸಿದೆ.

‘ಕೆಜಿಎಫ್ ಚಾಪ್ಟರ್ 1’ರಲ್ಲಿ ನಟ ಅನಂತನಾಗ್ ಅವರು ಪತ್ರಕರ್ತ ಆನಂದ್ ಇಂಗಳಗಿ ಪಾತ್ರದಲ್ಲಿ ನಟಿಸಿದ್ದರು. ಮಾಳವಿಕಾ ಎದುರು ರಾಕಿ ಭಾಯ್ ಕಥೆಯನ್ನು ನಿರೂಪಿಸಿದ್ದು ಅವರೇ. ಆದರೆ, ಅನಂತನಾಗ್ ಮತ್ತು ಚಿತ್ರತಂಡ ನಡುವಿನ ಹೊಂದಾಣಿಕೆಯ ಕೊರತೆ ಪರಿಣಾಮ ಅವರು ಕೆಜಿಎಫ್ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳಗಳ ಹಿಂದೆ ಹಬ್ಬಿತ್ತು. ಆದರೆ, ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆ ವೇಳೆ ಸಾಮಾಜಿಕ ಜಾಲತಾಣದಲ್ಲಿ ಎದ್ದಿದ್ದ ಸುದ್ದಿಗಳಿಗೆ ಪ್ರಕಾಶ್ ರಾಜ್ ಈಗ ಹಂಚಿಕೊಂಡಿರುವ ಫೋಟೊಗಳು ಉತ್ತರ ನೀಡುತ್ತಿವೆ.

ಮಾಳವಿಕಾ ಅವಿನಾಶ್ ಕೂಡ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಆನಂದ್ ಇಂಗಳಗಿ ಪಾತ್ರದಲ್ಲಿ ಪ್ರಕಾಶ್ ರಾಜ್ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಚಿತ್ರತಂಡ ಮಾತ್ರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

ಪ್ರಕಾಶ್ ರಾಜ್ ‘ಕೆಜಿಎಫ್ ಚಾಪ್ಟರ್ 2’ನಲ್ಲಿ ನಟಿಸುತ್ತಿರುವುದನ್ನು ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ.

‘ನಾವು ಕೊನೆಗೂ ಚಾಪ್ಟರ್ 2 ಶೂಟಿಂಗ್ ಆರಂಭಿಸಿದ್ದೇವೆ. ಪ್ರಕಾಶ್ ರಾಜ್ ಇದರಲ್ಲಿ ನಟಿಸುತ್ತಿದ್ದಾರೆ. ನಮ್ಮ ಸಿನಿಮಾದ ಮೇಲೆ ಕುತೂಹಲ ಇಟ್ಟುಕೊಂಡಿರುವ ಮತ್ತು ಪ್ರೀತಿ ತೋರುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ’ ಎಂದು ಪ್ರಶಾಂತ್ ನೀಲ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.