ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಯ ರಾಯಭಾರಿಯಾಗಿ ಆಯ್ಕೆಯಾಗಿರುವ, ನಟ ಪ್ರಕಾಶ್ ರಾಜ್ ಸಾಮಾಜಿಕ ಮಾಧ್ಯಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
.ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ಕುಟುಂಬ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್ ಅವರು, '17 ವರ್ಷಗಳ ಹಿಂದೆ ಬೆಂಗಳೂರಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಾನೇ ಉದ್ಘಾಟಿಸಿದ್ದೆ. ಇದೀಗ, ಇದರ ರಾಯಭಾರಿ ಆಗಿ ನಾನು ಆಯ್ಕೆ ಆಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಎಲ್ಲರ ಜತೆ ಸೇರಿ ಸಿನಿಮಾವನ್ನು ಆಚರಿಸೋಣ’ ಎಂದು ಬರೆದುಕೊಂಡಿದ್ದಾರೆ.

‘ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಆಗಲಿದ್ದು, ಜನವರಿ 29ರಿಂದ ಫೆಬ್ರುವರಿ 6ರವರೆಗೆ ಈ ಕಾರ್ಯಕ್ರಮ ನಡೆಯಲಿದೆ.

ಇನ್ನೂ ಈ ಬಾರಿಯ ಸಿನಿಮೋತ್ಸವದಲ್ಲಿ ಮಹಿಳಾ ಸಬಲೀಕರಣ ಆಧಾರಿತ ಚಿತ್ರಗಳಿಗೆ ಆದ್ಯತೆ ನೀಡಲಾಗಿದೆ.
.ಸಾಂತಾ ಕ್ಲಾಸ್ ಅವತಾರದಲ್ಲಿ 'ಅಪ್ಪು' ; ಅಭಿಮಾನಿಗಳ ಮೆಚ್ಚುಗೆ.
ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೊಲಿಸ್ನ 11 ಪರದೆಗಳಲ್ಲಿ ಹಾಗೂ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರದಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

ಬೆಂಗಳೂರಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.