ಬೆಂಗಳೂರು: ‘‘ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು’‘ ಎಂದು ಪ್ರಶಾಂತ್ ಸಂಬರಗಿ ಎನ್ನುವ ವ್ಯಕ್ತಿಯೊಬ್ಬರು ನಟ ಪ್ರಕಾಶ್ ರಾಜ್ ಅವರು ನದಿಯಲ್ಲಿ ಸ್ನಾನ ಮಾಡಿ, ಕೈ ಮುಗಿಯುತ್ತಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಕಾಶ್ ರಾಜ್, ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

“ಸುಳ್ಳ ರಾಜ” ನ ಹೇಡಿಗಳ ಸೈನ್ಯಕ್ಕೆ .. ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ .. ಪೊಲೀಸ್ ದೂರು ದಾಖಲಾಗಿದೆ .. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ‘ ಎಂದು ಪೋಸ್ಟ್ ಮಾಡಿದ್ದಾರೆ.

ನಟ ಪ್ರಕಾಶ್ ರಾಜ್ ಅವರು ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡಿದ್ದಾರೆ. ಅವರ ಪಾಪಗಳು ತೊಳೆದು ಹೋಗಲಿ ಎಂದು ಆಶಾಭಾವನೆ ವ್ಯಕ್ತಪಡಿಸೋಣ ಎಂದು ಪ್ರಶಾಂತ್ ಸಂಬರಗಿ ಎನ್ನುವರು ಫೋಟೊ ಹಂಚಿಕೊಂಡಿದ್ದರು.

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.