ಮಂಗಳವಾರ, ಸೆಪ್ಟೆಂಬರ್ 21, 2021
21 °C

ಮೈಸೂರಿನ ಬಡಕುಟುಂಬಕ್ಕೆ ಉಚಿತವಾಗಿ ಜೆಸಿಬಿ ನೀಡಿದ ಪ್ರಕಾಶ್‌ ರಾಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್‌ ರಾಜ್‌ ಬಡಕುಟುಂಬವೊಂದಕ್ಕೆ ಹೊಸ ಜೆಸಿಬಿಯನ್ನು ಉಡುಗೊರೆ ನೀಡುವ ಮೂಲಕ ಆ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. 

ಹೊಸ ಜೆಸಿಬಿ ವಾಹವನ್ನು ಪ್ರಕಾಶ್ ರಾಜ್‌ ಆ ಬಡ ಕುಟುಂಬಕ್ಕೆ ಉಚಿತವಾಗಿ ನೀಡಿದ್ದಾರೆ. ಜೆಸಿಬಿ ವಾಹವನ್ನು ಬಳಸಿ ದುಡಿದು ಜೀವನ ನಡೆಸಲು ದಾರಿ ಮಾಡಿಕೊಟ್ಟಿದ್ದಾರೆ.

ಜೆಸಿಬಿ ಹಸ್ತಾಂತರ ಮಾಡುತ್ತಿರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ’ಜೆಸಿಬಿ ನೀಡುವ ಮೂಲಕ ಈ ಕುಟುಂಬವನ್ನು ಆರ್ಥಿಕವಾಗಿ ಸಬಲ ಮಾಡುವ ಯತ್ನ’ ಎಂದು ಬರೆದುಕೊಂಡಿದ್ದಾರೆ. ಪ್ರಕಾಶ್‌ರಾಜ್ ಫೌಂಡೇಶನ್ ಮೂಲಕ ಈ ಜೆಸಿಬಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. 

ಸದ್ಯ ತಮಿಳು, ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪ್ರಕಾಶ್‌ ರಾಜ್‌ , ತೆಲುಗು ಚಿತ್ರರಂಗದ ಪ್ರತಿಷ್ಠಿತ ಎಂಎಎ (ಮೂವಿ ಆರ್ಟಿಸ್ಟ್ ಅಸೋಸಿಯೇಷನ್) ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಪ್ರಕಾಶ್ ರಾಜ್‌ಗೆ  ನಟ ಚಿರಂಜೀವಿ ಮತ್ತು ಮೆಗಾಸ್ಟಾರ್ ಕುಟುಂಬ ಬೆಂಬಲ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು