ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ: ಬಿಜೆಪಿ ಸೇರಲಿರುವ ನಟ ಸುದೀಪ್: ಪ್ರಕಾಶ್ ರಾಜ್ ಹೇಳಿದ್ದೇನು?

Last Updated 5 ಏಪ್ರಿಲ್ 2023, 8:04 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ಸ್ಟಾರ್‌ ನಟರಾದ ಕಿಚ್ಚ ಸುದೀಪ್‌ ಹಾಗೂ ದರ್ಶನ್‌ ತೂಗುದೀಪ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ನಟ ಪ್ರಕಾಶ್‌ ರಾಜ್‌ ‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ನಟರಿಬ್ಬರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು(ಬುಧವಾರ) ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ಮುಖಂಡರು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂಬಲ್ಲ ಸುದ್ದಿಗಳು ಬೆಳಿಗ್ಗೆಯಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಹು ಭಾಷಾ ನಟ ಪ್ರಕಾಶ್‌ ರಾಜ್‌, ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT