ಸೋಮವಾರ, ಆಗಸ್ಟ್ 8, 2022
23 °C

'ಹಿಂದೂಗಳ ಜೀವ ಮುಖ್ಯ': ಟೈಲರ್‌ ಹತ್ಯೆ ಖಂಡಿಸಿ ನಟಿ ಪ್ರಣೀತಾ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಹತ್ಯೆ ಖಂಡಿಸಿ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕನ್ನಡದ ನಟಿ ಪ್ರಣೀತಾ ಸುಭಾಷ್ ಈ ಘಟನೆಯನ್ನು ಖಂಡಿಸಿದ್ದಾರೆ. 

ಟೈಲರ್‌ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ನಟಿ ಪ್ರಣಿತಾ, ಟ್ವಿಟರ್‌ನಲ್ಲಿ ಹಿಂದೂಗಳ ಜೀವ ಮುಖ್ಯ ಎಂದು ತಿಳಿಸಿದ್ದಾರೆ.

ಹಿಂದೂಗಳ ಜೀವ ಮುಖ್ಯ (Hindu Lives Matter) ಎಂದು ಬರೆದಿರುವ ಫಲಕವನ್ನು ಕೈಯಲ್ಲಿ ಹಿಡಿದು ನಿಂತಿರುವ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ: 

ಈ ಹಿಂದೆ ಕೂಡ ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ್ದ ಪ್ರಣೀತಾ, ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಮರೆಮಾಚಲು ಕೆಲವರು 'ಹಿಂದೂ ಟೆರರ್' ಪದ ಬಳಕೆ ಮಾಡ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಕನ್ಹಯ್ಯ ಲಾಲ್ ಮೇಲೆ ಇಬ್ಬರು ಮುಸ್ಲಿಂ ಯುವಕರು ಅಮಾನವೀಯ ರೀತಿಯಲ್ಲಿ ಕೊಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದಾರೆ.

 ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು