ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಲಾರ್‌’ ನೈಜ ಕಥೆ, ರೀಮೇಕ್ ಅಲ್ಲ: ವದಂತಿಗಳಿಗೆ ತೆರೆ ಎಳೆದ ನಿರ್ದೇಶಕ ಪ್ರಶಾಂತ್

Last Updated 8 ಏಪ್ರಿಲ್ 2022, 12:32 IST
ಅಕ್ಷರ ಗಾತ್ರ

ಹೈದರಾಬಾದ್: ತೆಲುಗು ನಟ ಪ್ರಭಾಸ್‌ ಅಭಿನಯದ ಮುಂದಿನ ಚಿತ್ರ ‘ಸಲಾರ್‌’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ.

‘ಕೆಜಿಎಫ್ ಚಾಪ್ಟರ್‌– 2’ ಬಿಡುಗಡೆಯಲ್ಲಿ ಬ್ಯುಸಿಯಾಗಿರುವ ನಿರ್ದೇಶಕ ಪ್ರಶಾಂತ್ ನೀಲ್, ‘ಸಲಾರ್’ ಚಿತ್ರದ ಕಥೆ ಕುರಿತು ಕೇಳಿಬಂದಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದು, ಚಿತ್ರದ ಬಗೆಗಿನ ಕೆಲವು ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ.

‘ಸಲಾರ್’ ಸಿನಿಮಾವು ಪ್ರಶಾಂತ್ ನೀಲ್ ಅವರ ನಿರ್ದೇಶನದ ಚೊಚ್ಚಲ ಸಿನಿಮಾ ಕನ್ನಡದ ‘ಉಗ್ರಂ’ನ ರೀಮೇಕ್ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು.

‘ನಾನು ನಿರ್ದೇಶಿಸುವ ಎಲ್ಲಾ ಚಿತ್ರಗಳು ‘ಉಗ್ರಂ’ ಛಾಯೆಯನ್ನು ಹೊಂದಿರುತ್ತವೆ. ಅದು ನನ್ನ ಶೈಲಿ! ಆದರೆ, ಸಲಾರ್ ಒಂದು ಹೊಸ ಕಥೆ. ಇದು ರೀಮೇಕ್ ಅಲ್ಲ’ ಎಂದು ಪ್ರಶಾಂತ್ ನೀಲ್ ಸ್ಪಷ್ಟಪಡಿಸಿದ್ದಾರೆ.

‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಶ್ರುತಿ ಹಾಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಶೇ 30ರಷ್ಟು ಚಿತ್ರೀಕರಣ ಮುಗಿದಿದೆ ಎಂದು ವರದಿಯಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT