‘ಪುಷ್ಪ’, ‘ರಂಗಸ್ಥಳಂ’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ಹೈದರಾಬಾದ್‌ನಲ್ಲಿ ನಡೆದ ಮುಹೂರ್ತದ ದಿನದಂದೇ ಚಿತ್ರ ರಿಲೀಸ್ ದಿನಾಂಕವನ್ನೂ ಘೋಷಿಸಲಾಗಿದೆ. ಈ ಬಿಗ್ ಬಜೆಟ್ ಸಿನಿಮಾ 2026ರ ಜನವರಿ 9ರಂದು ಬಿಡುಗಡೆಯಾಗಲಿದೆ. ಶೀಘ್ರದಲ್ಲೇ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಕನ್ನಡದಲ್ಲಿ ಕೆ.ಜಿ.ಎಫ್. ಸಿನಿಮಾ ಸರಣಿ ಬಳಿಕ, ನೀಲ್ ‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್‌ಗೆ ಆ್ಯಕ್ಷನ್ ಕಟ್ ಹೇಳಿದ್ದರು. ಇದೀಗ ‘ಆರ್.ಆರ್.ಆರ್’ ಖ್ಯಾತಿಯ ಜೂನಿಯರ್ ಎನ್‌ಟಿಆರ್‌ಗೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಮೂಲ ತೆಲುಗು ಜತೆಗೆ, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳದಲ್ಲಿ ಸಿನಿಮಾ ತೆರೆಕಾಣಲಿದೆ.