ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರೀತಿಯ ಹುಚ್ಚ’ನ ದುರಂತ ಕಥೆ: ಬಿಡುಗಡೆಗೆ ಸಜ್ಜು

Published 22 ಫೆಬ್ರುವರಿ 2024, 22:30 IST
Last Updated 22 ಫೆಬ್ರುವರಿ 2024, 22:30 IST
ಅಕ್ಷರ ಗಾತ್ರ

ಈ ಹಿಂದೆ ‘ಗಾಯತ್ರಿ’ ಎಂಬ ಹಾರರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ವಿ.ಕುಮಾರ್ ನಿರ್ದೇಶಿಸಿರುವ ‘ಪ್ರೀತಿಯ ಹುಚ್ಚ’ ಬಿಡುಗಡೆಗೆ ಸಜ್ಜಾಗಿದೆ. ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಟಿ. ಗೌರಿಕುಮಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘1998-99ರಲ್ಲಿ ಹಾಸನದಲ್ಲಿ ನಡೆದ ನೈಜ ಘಟನೆಯೊಂದು ಈ ಚಿತ್ರಕ್ಕೆ ಪ್ರೇರಣೆ. ಅಮಾಯಕ ಯುವತಿಯೊಬ್ಬಳ ದಾರುಣ ಕಥೆ. ಮದುವೆಯಾದ ಮೊದಲ ರಾತ್ರಿಯೇ ಮುಂಬೈನ ರೆಡ್‌ಲೈಟ್ ಏರಿಯಾಕ್ಕೆ ಮಾರಾಟವಾಗುವ ನಾಯಕಿಯ ಜೀವನ ಮುಂದೆ ಹೇಗೆಲ್ಲ ತಿರುವು ಪಡೆದುಕೊಂಡಿತು ಎಂಬುದನ್ನು ಚಿತ್ರದಲ್ಲಿಯೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕರು. 

ಬೆಂಗಳೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. 

ವಿಜಯ್ ನಾಯಕನಾಗಿ ನಟಿಸಿದ್ದು, ಮುಂಬೈ ಮೂಲದ ಕುಂಕುಮ್ ನಾಯಕಿ. ಜೆ.ಎನ್. ರಂಗರಾಜನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುನಿಲ್ ಕೆ.ಆರ್‌.ಎಸ್. ಅವರ ಛಾಯಾಚಿತ್ರಗ್ರಹಣ, ಪ್ರವೀಣ್ ವಿಷ್ಣು ಅವರ ಸಂಕಲನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT