ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೆನಪಿರಲಿ’ ಖ್ಯಾತಿಯ ಪ್ರೇಮ್‌ ನಟನೆಯ ಪ್ರೇಮಂ ಪೂಜ್ಯಂ–2ಗೆ ಚಾಲನೆ ಫೆ.14ಕ್ಕೆ

Last Updated 21 ಡಿಸೆಂಬರ್ 2021, 12:58 IST
ಅಕ್ಷರ ಗಾತ್ರ

‘ನೆನಪಿರಲಿ’ ಖ್ಯಾತಿಯ ಪ್ರೇಮ್‌ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಬಿಡುಗಡೆಯಾಗಿ 50ನೇ ದಿನದ ಸನಿಹದಲ್ಲಿರುವ ಸಂದರ್ಭದಲ್ಲೇ, ಚಿತ್ರದ ನಿರ್ದೇಶಕ ಡಾ.ರಾಘವೇಂದ್ರ ಎರಡನೇ ಭಾಗ ನಿರ್ಮಾಣಕ್ಕೆ ಸಿದ್ಧತೆ ಆರಂಭಿಸಿದ್ದಾರೆ.

ಪ್ರೇಮಂ ಪೂಜ್ಯಂ 2ನೇ ಭಾಗದ ಚಿತ್ರೀಕರಣಕ್ಕೆ 2022ರ ಫೆ.14ಕ್ಕೆ ಚಾಲನೆ ನೀಡಲು ಚಿತ್ರತಂಡ ನಿರ್ಧರಿಸಿದೆ. ರಾಘವೇಂದ್ರ ಅವರು ಈಗಾಗಲೇ ಎರಡನೇ ಭಾಗಕ್ಕೆ ಚಿತ್ರಕಥೆಯನ್ನೂ ಸಿದ್ಧಪಡಿಸಿಕೊಂಡಿದ್ದಾರೆ. ಮುಂದಿನ ಭಾಗದಲ್ಲಿ ಒಂದಷ್ಟು ಕುತೂಹಲಕರ ಕಥೆಯನ್ನು ಬಿಚ್ಚಿಡಲು ನಿರ್ಧರಿಸಿದ್ದಾರೆ. ಮೊದಲ ಭಾಗದಲ್ಲಿ ಕೆಲಸ ಮಾಡಿದ್ದ ಬಹುತೇಕ ಕಲಾವಿದ, ತಂತ್ರಜ್ಞರೇ ಈ ಚಿತ್ರದಲ್ಲೂ ಸಹ ಮುಂದುವರಿಯಲಿದ್ದಾರೆ ಎಂದು ಚಿತ್ರತಂಡವು ತಿಳಿಸಿದೆ.

‘ಪ್ರೇಮಂ ಪೂಜ್ಯಂ’ ಪ್ರೇಮ್ ಅಭಿನಯದ 25ನೇ ಚಿತ್ರ. ಇದರಲ್ಲಿ ವೈದ್ಯಕೀಯ ವಿದ್ಯಾರ್ಥಿಯ ಪಾತ್ರ ಏಳು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದರು. ನಾಯಕಿ ಬೃಂದಾ ಆಚಾರ್ಯ, ಪ್ರೇಮ್‌ ಗೆಳೆಯರಾಗಿ ಕಾಣಿಸಿಕೊಂಡಿದ್ದ ಮಾಸ್ಟರ್‌ ಆನಂದ್‌ ಹಾಗೂ ಸಾಧುಕೋಕಿಲ ನಟನೆಗೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ‘ತಮಿಳು, ತೆಲುಗು ನಿರ್ಮಾಪಕರಿಂದ ರಿಮೇಕ್ ಹಕ್ಕಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಅಲ್ಲದೆ ಒಟಿಟಿಯಿಂದಲೂ ಉತ್ತಮ ಆಫರ್ ಬರುತ್ತಿದ್ದು, ನಿರ್ಮಾಪಕರು ಸದ್ಯ ಯಾವುದನ್ನೂ ಒಪ್ಪಿಕೊಳ್ಳದೆ ಚಿತ್ರವು ನೂರು ದಿನಗಳ ಪ್ರದರ್ಶನವಾದ ನಂತರ ರಿಮೇಕ್‌ ಹಕ್ಕು ಮಾರಾಟಕ್ಕೆ ನಿರ್ಧರಿಸಿದ್ದಾರೆ’ ಎಂದು ಚಿತ್ರತಂಡವು ತಿಳಿಸಿದೆ.

ಡಾ.ರಕ್ಷಿತ್ ಕದಂಬಾಡಿ, ಡಾ.ರಾಜಕುಮಾರ್ ಜಾನಕಿರಾಮನ್, ಮನೋಜ್‌ಕೃಷ್ಣನ್ ಹಾಗೂ ರಾಘವೇಂದ್ರ ಎಸ್. ಸೇರಿ ನಿರ್ಮಿಸಿರುವ ಈ ಚಿತ್ರಕ್ಕೆ ಡಾ.ಮಾಧವಕಿರಣ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT