ಶನಿವಾರ, ಜುಲೈ 2, 2022
22 °C

’ಸಲಾರ್‌’: ಪ್ರಭಾಸ್‌ಗೆ ಮಲಯಾಳಂ ನಟ ಪೃಥ್ವಿರಾಜ್‌ ವಿಲನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಹುಬಲಿ ಖ್ಯಾತಿಯ ಪ್ರಭಾಸ್‌ ನಟನೆಯ ’ಸಲಾರ್‌’ ಸಿನಿಮಾದಲ್ಲಿ ಮಲಯಾಳಂ ನಟ ಪೃಥ್ವಿರಾಜ್‌ ಖಳ ನಟರಾಗಿ ಅಭಿನಯ ಮಾಡಲಿದ್ದಾರೆ ಎಂದು ಪ್ರಭಾಸ್‌ ಹೇಳಿದ್ದಾರೆ.

’ಸಲಾರ್‌’ ಸಿನಿಮಾವನ್ನು ಕನ್ನಡಿಗೆ ಪ್ರಶಾಂತ್‌ ನೀಲ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಸಂ ನಿರ್ಮಾಣ ಮಾಡುತ್ತಿದೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು ’ಸಲಾರ್‌’ನಲ್ಲಿ ಪೃಥ್ವಿರಾಜ್‌ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಲೀಕ್‌ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ನಿರ್ದೇಶಕರು ಮಾಹಿತಿ ನೀಡಲಿದ್ದಾರೆ ಎಂದು ಪ್ರಭಾಸ್‌ ಹೇಳಿದ್ದಾರೆ. 

ಇದನ್ನು ಓದಿ: 

ಈಗಾಗಲೇ ಚಿತ್ರದ ಶೂಟಿಂಗ್‌ ಆರಂಭವಾಗಿದೆ. ಕೆಲವು ಹಂತಗಳಲ್ಲಿ ಶೃತಿ ಹಾಸನ್‌ ಕೂಡ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಪೃಥ್ವಿರಾಜ್‌ ನಟನೆ ಬಗ್ಗೆ ಚಿತ್ರತಂಡ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ.

ಸದ್ಯ ಪ್ರಭಾಸ್​, ಪೂಜಾ ಹೆಗ್ಡೆ ನಟಿಸಿರುವ ‘ರಾಧೆ ಶ್ಯಾಮ್​’ ಸಿನಿಮಾ ಮಾರ್ಚ್​ 11ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ.

ಇದನ್ನು ಓದಿ:   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು