ಭಾನುವಾರ, ಸೆಪ್ಟೆಂಬರ್ 19, 2021
23 °C

ಕ್ಲೈಮ್ಯಾಕ್ಸ್‌ ಹಂತದಲ್ಲಿ ಪ್ರಿಯಾಂಕ ಉಪೇಂದ್ರರ ‘ಉಗ್ರಾವತಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಮೂರ್ತಿ ನಿರ್ದೇಶನದ, ಪ್ರಿಯಾಂಕ ಉಪೇಂದ್ರ ನಟಿಸುತ್ತಿರುವ ‘ಉಗ್ರಾವತಾರ’ ಚಿತ್ರದ ಚಿತ್ರೀಕರಣ ಕೊನೆಯ ಹಂತ ತಲುಪಿದ್ದು, ಕ್ಲೈಮ್ಯಾಕ್ಸ್‌ನ ಫೈಟ್‌ಗೆ ನೆಲಮಂಗಲ ಬಳಿ ಇರುವ ರೆಸಾರ್ಟ್‌ವೊಂದರಲ್ಲಿ ಸೆಟ್ ಹಾಕಲಾಗುತ್ತಿದೆ.

ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಪ್ರಿಯಾಂಕ ಕಾಣಿಸಿಕೊಂಡಿದ್ದು, ಇತ್ತೀಚೆಗೆ ಲಕ್ಷೀಪುರದಲ್ಲಿರುವ ‘ರಾಜಲಕ್ಷ್ಮಿ’ ಆಸ್ಪತ್ರೆಯಲ್ಲಿ ಚಿತ್ರದ ಚಿತ್ರೀಕರಣ ನಡೆಯಿತು. ‘ಕ್ಲೈಮ್ಯಾಕ್ಸ್ ಫೈಟ್ ಮಾಡಿ ಕುಂಬಳಕಾಯಿ ಒಡೆಯಲಾಗುತ್ತದೆ. ಇದಕ್ಕಾಗಿ ನೆಲಮಂಗಲ ಬಳಿ ಇರುವ ರೆಸಾರ್ಟ್‌ನಲ್ಲಿ ಸೆಟ್ ಹಾಕಲಾಗುತ್ತಿದೆ. ಪ್ರಸಕ್ತ ಸಾಮಾಜಿಕ ವಿಷಯಗಳು, ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆ, ಅಪರಾಧ ಮುಂತಾದ ಗಂಭೀರ ವಿಷಯಗಳನ್ನು ಇಟ್ಟುಕೊಂಡು ಕಥೆ ಹೆಣೆಯಲಾಗಿದೆ’ ಎನ್ನುತ್ತಾರೆ ನಿರ್ದೇಶಕ ಗುರುಮೂರ್ತಿ.

‘ಇದೊಂದು ಆ್ಯಕ್ಷನ್‌ ಚಿತ್ರ. ಸವಾಲಾಗಿ ಈ ಪಾತ್ರವನ್ನು ಸ್ವೀಕರಿಸಿದ್ದೇನೆ. ಮೊದಲ ಬಾರಿ ಇನ್‌ಸ್ಪೆಕ್ಟರ್‌ ಪಾತ್ರವನ್ನು ನಿಭಾಯಿಸುತ್ತಿದ್ದು, ಡ್ಯೂಪ್ ಬಳಸದೆ ಫೈಟ್ ಮಾಡಿದ್ದೇನೆ. ಇದಕ್ಕಾಗಿ ತರಬೇತಿ ಪಡೆಯಬೇಕಾಯಿತು. ನಾನು ನಟಿಸಿದ ‘1980’, ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದೆ. ಮುಂದೆ ನಮ್ಮದೇ ಪ್ರೊಡಕ್ಷನ್ ಹೌಸ್‌ನಿಂದ ಚಿತ್ರ ನಿರ್ಮಾಣ ಮಾಡುವ ಯೋಜನೆ ಇದೆ’ ಎಂದರು ಪ್ರಿಯಾಂಕ ಉಪೇಂದ್ರ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು