ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗಳಿಗೆ ‘ಮಾಲತಿ ಮೇರಿ’ ಎಂದು ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ - ನಿಕ್ ದಂಪತಿ

Last Updated 21 ಏಪ್ರಿಲ್ 2022, 7:23 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೋನಸ್‌‌ ಅವರು ಮಗಳಿಗೆ ‘ಮಾಲತಿ ಮೇರಿ’ (Malti Marie) ಎಂದು ನಾಮಕರಣ ಮಾಡಿದ್ದಾರೆ.

ಜನನ ಪ್ರಮಾಣ ಪತ್ರದಲ್ಲಿ ಮಗುವಿನ ಹೆಸರನ್ನು ‘ಮಾಲತಿ ಮೇರಿ’ ಎಂದು ಉಲ್ಲೇಖಿಸಲಾಗಿದೆ.

ಪ್ರಿಯಾಂಕಾ– ನಿಕ್ ದಂಪತಿ ತಾವು ಬಾಡಿಗೆ ತಾಯ್ತನದ (ಸರೊಗಸಿ) ಮೂಲಕ ಮಗು ಪಡೆದಿರುವುದಾಗಿ ಜನವರಿಯಲ್ಲಿ ಘೋಷಿಸಿದ್ದರು.

‘ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಈಗ ನಮ್ಮ ಕುಟುಂಬದ ಮೇಲೆ ಗಮನ ಹರಿಸಿದ್ದೇವೆ’ ಎಂದು ಪ್ರಿಯಾಂಕಾ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹೇಳಿಕೊಂಡಿದ್ದರು.

ಪ್ರಿಯಾಂಕಾ ಹಾಗೂ ನಿಕ್ ಜೋನಸ್‌‌ ದಂಪತಿ 2018 ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದರು. ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.

‘ಸಿಟಾಡೆಲ್‌’ ವೆಬ್ ಸೀರಿಸ್‌ನಲ್ಲಿ ಪ್ರಿಯಾಂಕಾ ಕಾಣಿಸಿಕೊಂಡಿದ್ದರು. ಸದ್ಯ ಫರ್ಹಾನ್ ಅಖ್ತರ್ ಆ್ಯಕ್ಷನ್ ಕಟ್‌ ಹೇಳುತ್ತಿರುವ ‘ಜೀ ಲೆ ಜರಾ’ ಚಿತ್ರದಲ್ಲಿ ಕತ್ರಿನಾ ಕೈಫ್, ಆಲಿಯಾ ಭಟ್‌ ಅವರೊಂದಿಗೆ ಪ್ರಿಯಾಂಕಾ ಅಭಿನಯಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT