ಬುಧವಾರ, ಮಾರ್ಚ್ 29, 2023
32 °C

Photos; ಪತಿ ನಿಕ್ ಜೋನಸ್ ಜೊತೆ ದೀಪಾವಳಿ ಆಚರಿಸಿದ ನಟಿ ಪ್ರಿಯಾಂಕಾ ಚೋಪ್ರಾ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅಮೆರಿಕದ ಖ್ಯಾತ ಗಾಯಕ ನಿಕ್ ಜೋನಸ್ ಸತಿ–ಪತಿಗಳಾದ ನಂತರ ಜಗತ್ತಿನ ಸುಂದರ ಜೋಡಿ ಎಂದು ಮೆಚ್ಚುಗೆ ಗಳಿಸಿದ್ದಾರೆ.

ಪತಿಯೊಡನೆ ಅಮೆರಿಕದಲ್ಲಿ ನೆಲೆಸಿದ್ದರೂ ಪ್ರಿಯಾಂಕಾ ಚೋಪ್ರಾ ಭಾರತೀಯ ಸಂಪ್ರದಾಯವನ್ನು ಬಿಟ್ಟು ಕೊಟ್ಟಿಲ್ಲ. ಅವರು ಈ ಸಾರಿಯ ದೀಪಾವಳಿಯನ್ನು ನಿಕ್ ಜೋನಸ್ ಜೊತೆಗೆ ವಿಶೇಷವಾಗಿ ಆಚರಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಕ್ಯಾಲಿಪೋರ್ನಿಯಾದ ಮನೆಯಲ್ಲಿ ತಮ್ಮ ಕುಟುಂಬದವರ ಹಾಗೂ ಆಪ್ತರ ಜೊತೆ ಲಕ್ಷ್ಮಿ ಪೂಜೆಯನ್ನು ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ನಿಕ್ ಜೋನಸ್ ಕೂಡ ಬಿಳಿ ಕುರ್ತಾದಲ್ಲಿ ಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ದೀಪಾವಳಿ ಶುಭಾಶಯ ಕೋರಿರುವ ನಿಕ್ ಜೋನ್ಸ್, ‘ನನ್ನ ಹೆಂಡತಿ ಪ್ರಿಯಾಂಕಾ ಭಾರತೀಯ ಅದ್ಭುತ ಸಂಪ್ರದಾಯಗಳನ್ನು ನನಗೆ ಪರಿಚಯಿಸಿದ್ದಾರೆ‘ ಎಂದಿದ್ದಾರೆ.

ರಾತ್ರಿ ದೀಪ ಬೆಳಗುವ ಕಾರ್ಯಕ್ರಮ ಇಟ್ಟುಕೊಂಡಿದ್ದ ಪ್ರಿಯಾಂಕಾ ಆಕರ್ಷಕ ಬಿಳಿ ಲೇಹೆಂಗಾದಲ್ಲಿ ಕಂಗೊಳಿಸಿದರೆ, ನಿಕ್ ಜೋನಸ್ ಕೂಡ ಭಾರತೀಯ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ. ಇಬ್ಬರೂ ಕೂಡ ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು