ತಾಯಿಯಾದ ನಟಿ ಪ್ರಿಯಾಂಕಾ ಚೋಪ್ರಾ: ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ನಿಕ್ ದಂಪತಿ

ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ, ಗಾಯಕ ನಿಕ್ ಜೊನಾಸ್ ಅವರು ಬಾಡಿಗೆ ತಾಯ್ತನದ (ಸರೊಗಸಿ) ಮೂಲಕ ಮಗು ಪಡೆದಿದ್ದಾರೆ.
ಈ ವಿಚಾರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ, ‘ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ನಮ್ಮ ಖಾಸಗಿತನವನ್ನು ಗೌರವಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಈಗ ನಮ್ಮ ಕುಟುಂಬದ ಮೇಲೆ ಗಮನ ಹರಿಸಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.
ಆದರೆ, ಮಗು ಗಂಡೋ? ಹೆಣ್ಣೋ? ಎಂಬುದನ್ನು ಪ್ರಿಯಾಂಕಾ ಖಚಿತಪಡಿಸಿಲ್ಲ. ಪ್ರಿಯಾಂಕಾ ಹಾಗೂ ನಿಕ್ ಜೊನಾಸ್ 2018 ರ ಡಿಸೆಂಬರ್ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದರು. ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.
ಈ ಸುದ್ದಿಯನ್ನು ಹಂಚಿಕೊಂಡಿದ್ದಕ್ಕೆ ನಿಕ್ ದಂಪತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು, ಹಿತೈಷಿಗಳು ಶುಭಾಶಯ ಕೋರುತ್ತಿದ್ದಾರೆ.
ಮಗು ಬೇಕೆಂದು ಇಚ್ಛಿಸಿದ ದಂಪತಿಯ ಪರವಾಗಿ ಗರ್ಭವನ್ನು ಧರಿಸಿ, ಒಂಬತ್ತು ತಿಂಗಳವರೆಗೆ ಭ್ರೂಣದ ಬೆಳವಣಿಗೆಗೆ ಸಹಕರಿಸಿ, ಹೆರಿಗೆ ಮಾಡಿಸಿಕೊಂಡ ಬಳಿಕ ಮಗುವನ್ನು ಅದರ ಪಾಲಕರಿಗೆ ಒಪ್ಪಿಸಲು ಬಾಡಿಗೆ ತಾಯಿ ಮತ್ತು ಅದರ ಪಾಲಕರ ಮಧ್ಯೆ ಮೊದಲೇ ಒಪ್ಪಂದ ಏರ್ಪಟ್ಟಿರುತ್ತದೆ. ಈ ರೀತಿ ಪ್ರಿಯಾಂಕಾ ದಂಪತಿ ಮಗು ಪಡೆದಿದ್ದಾರೆ.
ಅಮೆಜಾನ್ ಪ್ರೈಮ್ನಿಂದ ಆಫರ್: ಪುನೀತ್ ಸ್ಮರಣೆಗಾಗಿ ಉಚಿತ ಸಿನಿಮಾ ಪ್ರದರ್ಶನ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.