ಸೋಮವಾರ, ಡಿಸೆಂಬರ್ 6, 2021
23 °C

ನಾನು ಮತ್ತು ನಿಕ್ ಇಬ್ಬರೂ ಬಯಸುತ್ತಿರುವುದು ಮದ್ಯ –ನಿದ್ದೆ: ಪ್ರಿಯಾಂಕಾ ಚೋಪ್ರಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Priyanka Chopra Instagram Post

ಬೆಂಗಳೂರು: ಹಾಲಿವುಡ್ ದಂಪತಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಮಧ್ಯೆ ವಿರಸ ಮೂಡಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಪ್ರಿಯಾಂಕಾ, ನಾವಿಬ್ಬರೂ ಜತೆಯಾಗಿಯೇ ಇದ್ದೇವೆ ಎಂಬ ಸಂದೇಶ ನೀಡಿದ್ದರು.

ಅದಾದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಗರ್ಭಿಣಿ, ಮಗುವನ್ನು ಬಯಸುತ್ತಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಆದರೆ ಗರ್ಭಿಣಿಯಾಗಿರುವ ವಿಚಾರವನ್ನು ನಿರಾಕರಿಸಿರುವ ಪ್ರಿಯಾಂಕಾ ಚೋಪ್ರಾ, ನಾನು ಮತ್ತು ನಿಕ್ ನಿಜಕ್ಕೂ ಬಯಸುತ್ತಿರುವುದು ಕುಡಿದು ಚೆನ್ನಾಗಿ ನಿದ್ದೆ ಮಾಡಬೇಕು ಎನ್ನುವುದಾಗಿದೆ ಎಂದು ಹೇಳಿದ್ದಾರೆ.

ಒಟಿಟಿ ವೇದಿಕೆಯೊಂದರ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಿಕ್ ಜೋನಸ್ ಮುಂದೆಯೇ ಈ ಹೇಳಿಕೆ ನೀಡಿದ್ದಾರೆ.

ಪ್ರಿಯಾಂಕಾ ಹೇಳಿಕೆ ಕೇಳಿ ಒಂದು ಕ್ಷಣ ನಿಕ್ ದಂಗಾಗಿದ್ದಾರೆ. ಆದರೆ ಅವರ ಹೇಳಿಕೆ ಕಾರ್ಯಕ್ರಮದಲ್ಲಿದ್ದವರಿಗೆ ನಗು ತರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು