ಎಸ್.ಎಸ್. ರಾಜಮೌಳಿ ನಿರ್ದೆಶನದ ಹಾಗೂ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ನಟನೆಯಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ನಟಿಸಲಿದ್ದಾರೆ ಎಂದು ಅಧಿಕೃತವಾಗಿ ಚಿತ್ರತಂಡ ಘೋಷಿಸಿದೆ.

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ನಲ್ಲಿ ತಯಾರಾಗುತ್ತಿರುವ `ಗ್ಲೋಬ್ ಟ್ರೋಟರ್` ಚಿತ್ರದಿಂದ ನಟಿ ಪ್ರಿಯಾಂಕಾ ಚೋಪ್ರಾ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಪೋಸ್ಟರ್ನಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಹಳದಿ ಬಣ್ಣದ ಸೀರೆಯುಟ್ಟು, ಕೈಯಲ್ಲಿ ಗನ್ ಹಿಡಿದು, ಹೈ ಹೀಲ್ಸ್ ಹಾಕಿಕೊಂಡು ಶತ್ರುಗಳ ಮೇಲೆ ಗುಂಡನ್ನು ಹಾರಿಸುತ್ತಿದ್ದಾರೆ.

ಇದೇ ಪೋಸ್ಟರ್ ಅನ್ನು ನಟಿ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಅವಳು ಕಣ್ಣಿಗೆ ಕಾಣುವುದಕ್ಕಿಂತ ಹೆಚ್ಚಿನವಳು. ಮಂದಾಕಿನಿಗೆ ನಮಸ್ಕಾರ ಹೇಳಿ’ ಎಂದು ಬರೆದುಕೊಂಡಿದ್ದಾರೆ. ಇನ್ನು, ಈ ಸಿನಿಮಾದಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಮಂದಾಕಿನಿ ಪಾತ್ರದಲ್ಲಿ ನಟಿಸಲಿದ್ದಾರೆ.
.SS ರಾಜಮೌಳಿ-ಮಹೇಶ್ ಬಾಬು ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್: ಪೋಸ್ಟರ್ ಬಿಡುಗಡೆ.ಎಸ್.ಎಸ್. ರಾಜಮೌಳಿ, ಮಹೇಶ್ ಬಾಬು ಸಿನಿಮಾದ ಟೀಸರ್ ನವೆಂಬರ್ 15ರಂದು ಬಿಡುಗಡೆ.
ವಿಲನ್ ಪಾತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್

ಎಸ್.ಎಸ್ ರಾಜಮೌಳಿ ಹಾಗೂ ಮಹೇಶ್ ಬಾಬು ಸಂಯೋಜನೆಯಲ್ಲಿ ಮೂಡಿ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾದಲ್ಲಿ ಕುಂಭ ಎಂಬ ವಿಲನ್ ಪಾತ್ರದಲ್ಲಿ ನಟ ಪೃಥ್ವಿರಾಜ್ ಸುಕುಮಾರನ್ ನಟಿಸುತ್ತಿದ್ದಾರೆ. ಜೂನ್ 15ರಂದು ಸಿನಿಮಾದ ಶೀರ್ಷಿಕೆ, ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುವ ಈವೆಂಟ್ನಲ್ಲಿ ಟೈಟಲ್ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.