ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೇಯಸ್‌ ಹೊಸ ಚಿತ್ರಕ್ಕೆ ಪ್ರಿಯಾಂಕಾ...

Last Updated 30 ಮಾರ್ಚ್ 2023, 4:50 IST
ಅಕ್ಷರ ಗಾತ್ರ

ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಕೆ. ಮಂಜು ಹೊಸ ಸಿನಿಮಾ ಘೋಷಿಸಿದ್ದಾರೆ. ಕಾಲೇಜಿನ ಪ್ರೀತಿಯ ಸುತ್ತ ಸುತ್ತುವ ಈ ಚಿತ್ರಕ್ಕೆ ಪ್ರಿಯಾಂಕಾ ಕುಮಾರ್ ನಾಯಕಿಯಾಗಿ ಆಯ್ಕೆಗೊಂಡಿದ್ದಾರೆ. ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಹಾಗೂ ಎ.ಪಿ. ಅರ್ಜುನ್ ಹಾಗೂ ವಿರಾಟ್ ಕಾಂಬೋದ ಅದ್ದೂರಿ ಲವರ್ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿರುವ ಪ್ರಿಯಾಂಕಾ ಅವರಿಗೆ ಇದು ಮೂರನೇ ಚಿತ್ರವಿದು.

ಕೆಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಧು ಗೌಡ ಗಂಗೂರು ಈ ಚಿತ್ರದ ನಿರ್ದೇಶಕರು. ಆರ್. ಸಂತೋಷ್ ಕುಮಾರ್‌ ನಿರ್ಮಾಪಕರು. ಅರ್ಜುನ್ ಜನ್ಯ ಸಂಗೀತ, ಗಗನ್ ಗೌಡ ಛಾಯಾಗ್ರಹಣ, ರವಿವರ್ಮಾ ಸಾಹಸ ಚಿತ್ರಕ್ಕಿದೆ.

ಏಪ್ರಿಲ್ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು, ಕೊಡಗು, ಚಿಕ್ಕಮಗಳೂರು, ಕೇರಳದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT