ಭಾನುವಾರ, ಅಕ್ಟೋಬರ್ 24, 2021
28 °C

'ಪರಮ ಸುಂದರಿ' ಹಾಡಿಗೆ ಹೆಜ್ಜೆ ಹಾಕಿದ ಪ್ರಿಯಾಂಕಾ ಉಪೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲಿವುಡ್ ನಟಿ ಕೃತಿ ಸನೋನ್ ಹೆಜ್ಜೆ ಹಾಕಿರುವ ‘ಮಿಮಿ’ ಚಿತ್ರದ ಪರಮ ಸುಂದರಿ ಹಾಡು ಭಾರೀ ಮೆಚ್ಚುಗೆ ಗಳಿಸಿದೆ.

ಕಿರುತೆರೆ, ಹಿರಿತೆರೆ ನಟಿಯರು, ಮಾಡೆಲ್‌ಗಳು ಸೇರಿದಂತೆ ಹಲವರು ಈ ಹಾಡಿಗೆ ನೃತ್ಯ ಮಾಡಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಇದೀಗ, ನಟಿ ಪ್ರಿಯಾಂಕಾ ಉಪೇಂದ್ರ ಸಹ ಪರಮ ಸುಂದರಿ ಹಾಡಿಗೆ ತನ್ನ ಸಹೋದರಿ ಜತೆ ಹೆಜ್ಜೆ ಹಾಕಿದ್ದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ಧಾರೆ.

ಪ್ರಿಯಾಂಕಾ ಅವರ ವಿಡಿಯೊಗೆ ಹಲವರು ಲೈಕ್ ಒತ್ತಿದ್ದಾರೆ.

ಇತ್ತೀಚೆಗೆ, ಬಿಗ್ ಬಾಸ್ ಖ್ಯಾತಿಯ ಕಿರುತೆರೆ ನಟಿ ವೈಷ್ಣವಿ ಗೌಡ ಸಹ ಪರಮ ಸುಂದರಿ ಹಾಡಿಗೆ ತಮ್ಮದೇ ಆದ ಶೈಲಿಯಲ್ಲಿ ಕುಣಿದಿದ್ದರು.

ಎ.ಆರ್. ರೆಹಮಾನ್ ಸಂಗೀತ ನಿರ್ದೇಶನದ ಈ ಹಾಡನ್ನು ಶ್ರೇಯಾ ಘೋಷಾಲ್ ಹಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು