ಪ್ರಿಯಾಂಕಾ ಉಪೇಂದ್ರ ನಾಯಕಿಯಾಗಿ ನಟಿಸಿರುವ ‘ಸೆಪ್ಟೆಂಬರ್ 21’ ಚಿತ್ರ ಮೇ ತಿಂಗಳ ಅಂತ್ಯಕ್ಕೆ ತೆರೆಗೆ ಬರಲಿದೆ. ಕರೆನ್ ಕ್ರಿಷ್ಟಿ ಸುವರ್ಣ ನಿರ್ದೇಶನದ ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ ಪ್ರಚಾರ ಕಾರ್ಯ ಪ್ರಾರಂಭಿಸಿದೆ.

ಈ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಮೊದಲ ಬಾರಿಗೆ ಮಧ್ಯಮ ವರ್ಗದ ಮಹಿಳೆಯ ಪಾತ್ರ ಮಾಡಿದ್ದಾರೆ. ‘ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆಲ್ಝೈಮರ್ ಕಾಯಿಲೆಗೆ ತುತ್ತಾದ ರೋಗಿಗಳನ್ನು ಪಾಲನೆ ಮಾಡುವ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವೆ. ವೃತ್ತಿ ಜೀವನದಲ್ಲಿ ಬಹಳ ತೃಪ್ತಿ ನೀಡಿದ ಪಾತ್ರವಿದು. ಅತ್ಯಂತ ಸವಾಲಿನ ಪಾತ್ರ ಕೂಡ ಆಗಿತ್ತು. ಅದನ್ನು ಅಷ್ಟೇ ಸೊಗಸಾಗಿ ಯುವ ನಿರ್ದೇಶಕಿ ಕಟ್ಟಿಕೊಟ್ಟಿದ್ದಾರೆ. ಕೆಲ ಪ್ರಮುಖ ಚಿತ್ರೋತ್ಸವಗಳಲ್ಲಿಯೂ ಈ ಚಿತ್ರ ಪ್ರದರ್ಶನ ಕಂಡು ಮೆಚ್ಚುಗೆ ಗಳಿಸಿದೆ’ ಎಂದು ಪ್ರಿಯಾಂಕಾ ಉಪೇಂದ್ರ ಹೇಳಿದ್ದಾರೆ.

21ರ ಹರೆಯದ ಕರೆನ್ ಕ್ರಿಷ್ಟಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಿದು. ಮುಖ್ಯ ಪಾತ್ರದಲ್ಲಿ ಪ್ರವೀಣ್ ಸಿಂಗ್ ಸಿಸೋಡಿಯಾ, ಝರಿನ ವಾಹಬ್, ಅಮಿತ್ ಬೇಲ್, ಅಜಿತ್ ಶಿದಾಯೆ, ಸಚಿನ್ ಪಾಟೇಕರ್ ನಟಿಸಿದ್ದಾರೆ.

‘ರೋಗಿಗಿಂತ ಅವನ ಪಾಲನೆ ಮಾಡುವವರು ತೆಗೆದುಕೊಳ್ಳುವ ನಿರ್ಧಾರ ತುಂಬಾ ಮುಖ್ಯ’ ಎಂಬುದು ಚಿತ್ರದ ಅಡಿಬರಹವಾಗಿದೆ.

ರಾಜಶೇಖರ್ ಕಥೆ, ವಿನಯ್ ಚಂದ್ರ ಸಂಗೀತವಿದ್ದು, ಅನಿಲ್ ಕುಮಾರ್ ಛಾಯಾಚಿತ್ರಗ್ರಹಣವಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-51-122453105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.