ನಟಿ ಪ್ರಿಯಾಂಕಾ ಉಪೇಂದ್ರ ಇದೀಗ ಬಾಲಿವುಡ್ನತ್ತ ಹೆಜ್ಜೆ ಇಟ್ಟಿದ್ದಾರೆ. ಕರೆನ್ ಕ್ಷಿತಿ ಸುವರ್ಣ ನಿರ್ದೇಶಿಸಲಿರುವ ‘ಸೆಪ್ಟೆಂಬರ್ 21’ ಎಂಬ ಶೀರ್ಷಿಕೆಯುಳ್ಳ ಸಿನಿಮಾದಲ್ಲಿ ಪ್ರಿಯಾಂಕಾ ನಟಿಸಲಿದ್ದಾರೆ.

ಬೆಂಗಳೂರು ಮೂಲದ ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್ವೊಬ್ಬಳ ನಡುವಿನ ಕಥೆಯನ್ನು ಈ ಸಿನಿಮಾ ಹೊಂದಿದೆ. ಬಹುತಾರಾಗಣದ ಈ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ನರ್ಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ನ ಪ್ರವೀಣ್ ಸಿಂಗ್ ಸಿಸೋಡಿಯಾ, ಜರೀನಾ ವಹಾಬ್ ಮತ್ತು ಅಮಿತ್ ಬೆಹ್ಲ್ ಮುಖ್ಯಭೂಮಿಕೆಯಲ್ಲಿ ಇರಲಿದ್ದಾರೆ.

‘ಖಿನ್ನತೆ ಮತ್ತು ಸ್ಮರಣಶಕ್ತಿ ಕಳೆದುಕೊಂಡ ಅರವತ್ತು ವರ್ಷದ ವ್ಯಕ್ತಿ (ರಾಜ್ಕುಮಾರ್) ಪಾತ್ರದಲ್ಲಿ ಪ್ರವೀಣ್ ಸಿಂಗ್ ಸಿಸೋಡಿಯಾ ನಟಿಸುತ್ತಿದ್ದಾರೆ. ರಾಜ್ ಸ್ಥಿತಿ ಹದಗೆಡುತ್ತಿದ್ದಂತೆ, ಆರೈಕೆ ಮಾಡಲು ‘ಕಮಲಾ’ ಅವರ ಜೀವನಾಡಿಯಾಗುತ್ತಾಳೆ. ಭಾವನಾತ್ಮಕ ಬೆಂಬಲದ ಜತೆಗೆ ಆಕೆ ಅವನನ್ನು ಆರೈಕೆ ಮಾಡುತ್ತಿರುತ್ತಾಳೆ. ರೋಗಿಯ ಆರೈಕೆ ಮಾಡುವ ಮಹಿಳೆಯ ಹೋರಾಟ, ಕಾಯಿಲೆಯನ್ನು ನಿಭಾಯಿಸುವಾಗ ಎದುರಾಗುವ ಸವಾಲುಗಳು, ರೋಗಿ ಗುಣಮುಖನಾಗಬೇಕು ಎಂದು ಆಕೆ ಮಾಡುವ ಕೆಲಸ ಚಿತ್ರದ ಕಥೆ’ ಎಂದಿದ್ದಾರೆ ನಿರ್ದೇಶಕರು. ಚಿತ್ರವನ್ನು ಕೇರಳದ ಬರಹಗಾರ ನೆಲ್ಲೂಲಿ ಪಿ.ರಾಜಶೇಖರನ್ ಬರೆದಿದ್ದಾರೆ. ವಿನಯ್ ಚಂದ್ರ ಸಂಗೀತ, ಅನಿಲ್ ಕುಮಾರ್ ಕೆ. ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಚಿತ್ರದಲ್ಲಿ ನಾನಾ ಪಾಟೇಕರ್ ಅವರ ಸೋದರಳಿಯ ಸಚಿನ್ ಪಾಟೇಕರ್ ಕೂಡ ನಟಿಸಿದ್ದಾರೆ.

ಕರೆನ್ ಕ್ಷಿತಿಗೆ ಇದು ಚೊಚ್ಚಲ ಸಿನಿಮಾ. ಈ ಹಿಂದೆ 'ಹೈಡ್ ಆ್ಯಂಡ್ ಸೀಕ್’ ಎನ್ನುವ ಕಿರು ಚಿತ್ರವನ್ನು ಅವರು ನಿರ್ದೇಶಿಸಿದ್ದರು. ‘ಸೆಪ್ಟೆಂಬರ್ 21’ ಚಿತ್ರವನ್ನು ಬೆಲ್ಜಿಯಂ ಮೂಲದ ನಿರ್ಮಾಣ ಸಂಸ್ಥೆ ‘ಫಾಕ್ಸ್ ಆನ್ ಸ್ಟೇಜ್ ಬೆಲ್ಜಿಯಂ’, ‘ವಿಸಿಕಾ ಫಿಲ್ಮ್ಸ್’ ಮತ್ತು ‘ಫಿಲ್ಮ್ಸ್ ಮ್ಯಾಕ್ಸ್’ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಸದ್ಯ ಶೂಟಿಂಗ್ ಹಂತದಲ್ಲಿ ಈ ಸಿನಿಮಾವಿದೆ. ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಗೆ ಸ್ಪರ್ಧಿಸಿದ ಬಳಿಕ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.