ಸೋಮವಾರ, ಜನವರಿ 17, 2022
18 °C

ಬೆಳ್ಳಿ ತೆರೆಯ ಮೇಲೆ ಪುನೀತ್‌ ಬಯೋಪಿಕ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಡಿನ ಕಣ್ಮಣಿಯಂತೆ ಮೆರೆಯತ್ತಲೇ ಅಚಾನಕ್ಕಾಗಿ ‘ಕಾಣದಂತೆ ಮಾಯವಾದ’ ನಟ ಪುನೀತ್ ರಾಜಕುಮಾರ್‌ ನೆನಪುಗಳನ್ನು ಉಳಿಸಲು ಯುವರತ್ನ ನಿರ್ದೇಶಕನಾದ ಸಂತೋಷ್‌ ಆನಂದ್‌ ರಾಮ್‌ ಅವರು ಪುನೀತ್‌ ರಾಜ್‌ಕುಮಾರ್‌ ಅವರ ಬಯೋಪಿಕ್‌ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ. 

ಪುನೀತ್ ರಾಜ್‌ಕುಮಾರ್ ನಿಧನದ ಬಳಿಕ ನಿರ್ದೇಶಕ ಸಂತೋಷ್ ಆನಂದ್ ರಾಮ್  ಅವರು ಅಭಿಮಾನಿಗಳ ಬಳಿ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದರು. ಇದೇ ವೇಳೆ ಅಪ್ಪು ಅವರ ಬಯೋಪಿಕ್ ಮಾಡುವಂತೆ  ಅಭಿಮಾನಿಗಳು ಕೇಳಿಕೊಂಡಿದ್ದರು. ಇದಕ್ಕೆ ಸಂತೋಷ್ ಆನಂದ್‌ ರಾಮ್ ಅವರು ಮುಂದೆ ಮಾಡಬಹುದು ಎಂದು ಹೇಳಿದ್ದಾರೆ.

ಪುನೀತ್‌ ಅವರ ಜೀವನ ಚರಿತ್ರೆಯನ್ನು ತೆರೆಯ ಮೇಲೆ ತರಲು ನಾನು ಪ್ರಯತ್ನ ಮಾಡುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಹ ಸಖತ್‌ ಖುಷಿಯಾಗಿದ್ದಾರೆ. 

ಅ.29ರಂದು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಪುನೀತ್‌ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.

ಓದಿ: ಲೈಗರ್ ಚಿತ್ರೀಕರಣದ ಮಧ್ಯೆ ಕುದುರೆ ಸವಾರಿ ಹೊರಟ ಅನನ್ಯಾ ಪಾಂಡೆ

ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‌ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು. 

ಓದಿ: ಹೊಸ ಹಾದಿ ತೋರಿಸಿ ಹೋದ ಅಪ್ಪು’: ಪುನೀತ್‌ ರಾಜ್‌ಕುಮಾರ್‌ಗೆ ರಂಗನಮನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು