ಚಿತ್ರದುರ್ಗ: ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಮುರುಘಾ ಮಠ ಆಯ್ಕೆ ಮಾಡಿದೆ. ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

‘ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಶರಣರು ನ.10ರಂದು ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.