ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿ ದೇಶ ವಿದೇಶಗಳ ಸುದ್ದಿ ವಾಹಿನಿಗಳಲ್ಲೂ ಪ್ರಸಾರವಾಗಿದೆ. ಬಿಬಿಸಿ ನ್ಯೂಸ್‌ನಲ್ಲಿ ಪುನೀತ್ ಸಾವು ಮತ್ತು ಅಭಿಮಾನಿಗಳ ಆಕ್ರಂದನದ ಬಗ್ಗೆ ವರದಿಯಾಗಿದೆ.

ಪುನೀತ್ ರಾಜ್‌ಕುಮಾರ್ ನಿಧನದ ಸುದ್ದಿ ಓದಿದ ನಿರೂಪಕಿ, ಈ ದುಃಖವನ್ನು ಅವರ ಕುಟುಂಬ ಹೇಗೆ ಭರಿಸುತ್ತಿದೆ ಎಂದು ಲಂಡನ್ನಿನ ಸಿನಿಮಾ ವಿಮರ್ಶಕರನ್ನು ಕೇಳುತ್ತಾರೆ.

‘ನಾನು ಅವರ ಅಣ್ಣ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿದ್ದೆ. ಅವರ ಕುಟುಂಬ, ನಾನು ಸೇರಿದಂತೆ ಎಲ್ಲರೂ ಆಘಾತಕ್ಕೊಳಗಾಗಿದ್ದೇವೆ. ನಿನ್ನೆಯಷ್ಟೇ ಅಣ್ಣ ಮತ್ತು ಯಶ್ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರು. ಬೆಳಗ್ಗೆ(ಅ.29) ಪುನೀತ್ ಅವರು ಇನ್ನಿಲ್ಲ ಎಂಬ ಸುದ್ದಿ ಎಲ್ಲರಿಗೂ ದಿಗ್ಭ್ರಮೆ ಹುಟ್ಟಿಸಿದೆ. ಅವರಿಗಿನ್ನೂ ಕೇವಲ 46 ವರ್ಷ ವಯಸ್ಸಾಗಿತ್ತು. ಪ್ರತಿಭಾನ್ವಿತ ನಟರಾಗಿದ್ದ ಅವರು 29 ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವು ಚಿತ್ರಗಳು ನಿರ್ಮಾಣ ಹಂತದಲ್ಲಿವೆ. ಸಾವಿರಾರು ಸಂಖ್ಯೆಯ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ" ಎಂದು ವಿವರಿಸಿದರು.

ಹೌದು, ಆಸ್ಪತ್ರೆಗಳ ಮುಂದೆ ಜಮಾಯಿಸಿರುವ ಜನರನ್ನು ನೋಡಿದರೆ ಅವರ ಪ್ರಭಾವ ಹೇಗಿತ್ತು ಎಂಬುದು ಗೊತ್ತಾಗುತ್ತದೆ ಎಂದು ನಿರೂಪಕಿ ಹೇಳುತ್ತಾರೆ.

ಅದಕ್ಕೆ ಪ್ರತಿಕ್ರಿಯಿಸಿದ ವಿಮರ್ಶಕಿ, ಅವರು ಚಿಕ್ಕಂದಿನಿಂದಲೂ ಚಿತ್ರಗಳಲ್ಲಿ ನಟಿಸಿದ್ದಾರೆ. ಅಭಿಮಾನಿಗಳ ಜೊತೆಯೇ ಬೆಳೆದಿದ್ದಾರೆ. ಗಾಯಕರಾಗಿ ಗಮನ ಸೆಳೆದಿದ್ದಾರೆ. ಅವರ ತಂದೆ ಡಾ. ರಾಜ್‌ಕುಮಾರ್ ಎಲ್ಲರ ಪ್ರೀತಿಯ ನಟರಾಗಿದ್ದರು. ಅವರ ಜೊತೆಯೂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಕೇವಲ ನಟರಾಗಿ ಅಲ್ಲ. ಸಮಾಜ ಸೇವೆಯಿಂದಲೂ ಜನರಿಗೆ ಹತ್ತಿರವಾಗಿದ್ದರು. ಅವರ ಸಾವಿನ ಸುದ್ದಿ ನನಗೆ ಈಗಲೂ ನಂಬಲಾಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ.. LIVE| ಪುನೀತ್ ಅಂತ್ಯಸಂಸ್ಕಾರ ನಾಳೆ: ಅಂತಿಮ ದರ್ಶನ ಪಡೆದ ನಟಿ ರಮ್ಯಾ | Puneeth Rajkumar No More

ಇದನ್ನೂ ಓದಿ.. ಅಪ್ಪನ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ಪುನೀತ್ ಮಗಳು ಧೃತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.